Tuesday, May 19, 2026
Flats for sale
Homeರಾಜ್ಯಬೆಂಗಳೂರು : ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ,ಕಾಮುಕನಿಗಾಗಿ ಕಾಟನ್ ಪೇಟೆ ಪೊಲೀಸರ ಹುಡುಕಾಟ.

ಬೆಂಗಳೂರು : ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ,ಕಾಮುಕನಿಗಾಗಿ ಕಾಟನ್ ಪೇಟೆ ಪೊಲೀಸರ ಹುಡುಕಾಟ.

ಬೆಂಗಳೂರು : ನಗರದ ಕಾಟನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದ್ದು, ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಮಾಹಿತಿಯ ಪ್ರಕಾರ, ತಡರಾತ್ರಿ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ರಸ್ತೆಯ ಬದಿಯಲ್ಲಿ ಕಟ್ಟಿದ್ದ ಹಸುವಿನ ಬಳಿ ಹೋಗಿದ್ದಾನೆ. ಬಳಿಕ ಜನಸಂದಣಿ ಇಲ್ಲದ ಸಮಯವನ್ನು ದುರುಪಯೋಗಪಡಿಸಿಕೊಂಡು ಪ್ರಾಣಿಯ ಮೇಲೆ ಅಸಭ್ಯ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

ಈ ಸಂಪೂರ್ಣ ಘಟನೆ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಆರೋಪಿಯ ಮುಖಚಹರೆ ಹಾಗೂ ಆತ ಬಂದಿದ್ದ ವಾಹನದ ವಿವರಗಳು ಪೊಲೀಸರಿಗೆ ಲಭ್ಯವಾಗಿವೆ ಎಂದು ತಿಳಿದುಬಂದಿದೆ.

ಘಟನೆ ಬೆಳಕಿಗೆ ಬಂದ ತಕ್ಷಣ ಸಾರ್ವಜನಿಕರು ಹಾಗೂ ಪ್ರಾಣಿ ಪ್ರೇಮಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಆರೋಪಿಯನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಟನ್ ಪೇಟೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದಿದ್ದಾರೆ. ದ್ವಿಚಕ್ರ ವಾಹನದ ನೋಂದಣಿ ಸಂಖ್ಯೆಯ ಆಧಾರದ ಮೇಲೆ ಆರೋಪಿಯ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular