Friday, March 13, 2026
Flats for sale
Homeರಾಜಕೀಯಬೆಂಗಳೂರು ; ಹೃದಯಾಘಾತದಿಂದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಿಧನ.

ಬೆಂಗಳೂರು ; ಹೃದಯಾಘಾತದಿಂದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಿಧನ.

ಬೆಗಳೂರು: ಹೃದಯಾಘಾತಕ್ಕೆ ಒಳಗಾಗಿದ್ದಂತ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಅವರು ಚಿಕಿತ್ಸೆ ಫಲಿಸದೇ ನಿಧರಾಗಿರೋದಾಗಿ ಸುದ್ದಿ ತಿಳಿದು ಬಂದಿದೆ.

ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ನಿಧನರಾಗಿದ್ದಾರೆ. ಮೊನ್ನೆಯಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು.

ಕಳೆದ 15 ದಿನಗಳ ಹಿಂದೆ ರಾಜಾ ವೆಂಕಟಪಟ್ಟ ನಾಯಕ ಅವರಿಗೆ ಮೈಸೂರಿನ ಆಸ್ಪತ್ರೆಯಲ್ಲಿ ಕಿಡ್ನಿ ಸ್ಟೋನ್ ಚಿಕಿತ್ಸೆ ಪಡೆದುಕೊಂಡು ಬಂದಿದ್ದರು. ದಿಢೀರನೆ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular