Monday, March 16, 2026
Flats for sale
Homeರಾಜ್ಯಬೆಂಗಳೂರು : 14 ಕ್ಷೇತ್ರಗಳಲ್ಲಿ ನಾಳೆ ಮೊದಲನೇ ಹಂತದ ಮತದಾನ,ಶಾಂತಿಯುತ ಮತದಾನಕ್ಕೆ ಆಯೋಗ ಬಿಗಿ ಬಂದೋಬಸ್ತ್.

ಬೆಂಗಳೂರು : 14 ಕ್ಷೇತ್ರಗಳಲ್ಲಿ ನಾಳೆ ಮೊದಲನೇ ಹಂತದ ಮತದಾನ,ಶಾಂತಿಯುತ ಮತದಾನಕ್ಕೆ ಆಯೋಗ ಬಿಗಿ ಬಂದೋಬಸ್ತ್.

ಬೆಂಗಳೂರು : ರಾಜ್ಯದ 14ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಾಳೆ ನಡೆಯಲಿದ್ದು, ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಚುನಾವಣಾ ಆಯೋಗ ಸರ್ವಸಿದ್ಧತೆಯನ್ನು ಮಾಡಿಕೊಂಡಿದ್ದು, ಶಾAತಿಯುತ ಮತದಾನಕ್ಕೆ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ.

ನಾಳೆ ನಡೆಯಲಿರುವ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಮೈಸೂರು ರಾಜವಂಶಸ್ಥÀ ಯದುವೀರ ದತ್ತ ಒಡೆಯರ್, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಹೋದರ ಡಿ.ಕೆ. ಸುರೇಶ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಒಟ್ಟು 14 ಕ್ಷೇತ್ರಗಳಲ್ಲಿ 247 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದು, ಇವರುಗಳ ರಾಜಕೀಯ ಭವಿಷ್ಯಕ್ಕೆ ಮತದಾರರು ನಾಳೆ ಮುದ್ರೆ ಒತ್ತಲಿದ್ದಾರೆ.

ನಾಳೆ ನಡೆಯಲಿರುವ ಮತದಾನಕ್ಕೆ ಒಟ್ಟು 30,402 ಮತ ಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಒಟ್ಟಾರೆ 2,88,19,342 ಮತದಾರರು ಮತ ಚಲಾಯಿಸುವ ಅರ್ಹತೆ ಹೊಂದಿದ್ದಾರೆ. ಈ ಪೈಕಿ1,44,28,099 ಪುರುಷರು, 1, 43, 88,176 ಮಹಿಳೆಯರು ಮತ್ತು 3067 ತೃತೀಯ ಲಿಂಗಿಗಳಿದ್ದಾರೆ.

ನಾಳೆ ಮತದಾನ ಶಾಂತಿಯುತವಾಗಿ ಹಾಗೂ ಸುಗಮವಾಗಿ ನಡೆಯಲು ಚುನಾವಣಾ ಆಯೋಗ ಎಲ್ಲ ತಯಾರಿ ಮಾಡಿದ್ದು, ಮತಗಟ್ಟೆ ಕೆಲಸಕ್ಕಾಗಿ ಸುಮಾರು 1 ಲಕ್ಷ 40 ಸಾವಿರ ಸಿಬ್ಬಂದಿಗಳನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ.

ನಾಳೆ ರಾಜ್ಯದ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾAತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಮತದಾನ ಬೆಳಿಗ್ಗೆ 7 ರಿಂದ ಸAಜೆ 6 ರವರೆಗೂ ನಡೆಯಲಿದ್ದು, ಮತದಾರರು ತಮ್ಮ ಮತಗಟ್ಟೆಗಳನ್ನು ತಿಳಿದುಕೊಳ್ಳಲು ಚುನಾವಣಾ ಆಪ್‌ನ್ನು ಡೌನ್‌ಲೋಡ್ಮಾ ಡಿಕೊಳ್ಳಬಹುದಾಗಿದೆ.

ಈ ಆಪ್‌ನಲ್ಲಿ ಮತದಾರರಿಗೆ ಅವರ ಮತಗಟ್ಟೆ ಯಾವುದು ಮತ್ತು ವಾಹನಗಳನ್ನು ಎಲ್ಲಿ ನಿಲ್ಲಿಸಬೇಕು, ಅವರ ಮತದಾನ ಗುರುತಿನ ಚೀಟಿ ಎಲ್ಲವೂ ಸಿಗಲಿದೆ. ಮತದಾನ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಯಾಗದಂತೆ ಕಟ್ಟೆಚ್ಚರ ವಹಿಸಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಬಂದೋಬಸ್ತ್ಗಾಗಿ ಸುಮಾರು 50 ಸಾವಿರ ಸಿಬ್ಬಂದಿ ಹಾಗೂ 65 ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ.

ನಾಳೆ ಮತದಾನ ನಡೆಯಲಿರುವ ಮತಗಟ್ಟೆಗಳ ಪೈಕಿ ಸುಮಾರು 19,701 ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಸಿದ್ದತೆ ಮಾಡಲಾಗಿದ್ದು, 1370 ಬೂತ್‌ಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಮತಗಟ್ಟೆಗಳಿಗೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular