Thursday, July 23, 2026
Homeರಾಜ್ಯಬೆಂಗಳೂರು : 5 ವರ್ಷಕ್ಕಿಂತ ಹೆಚ್ಚು ಅವಧಿ ಒಂದೇ ಸ್ಥಳದಲ್ಲಿ ಕರ್ತವ್ಯದಲ್ಲಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ...

ಬೆಂಗಳೂರು : 5 ವರ್ಷಕ್ಕಿಂತ ಹೆಚ್ಚು ಅವಧಿ ಒಂದೇ ಸ್ಥಳದಲ್ಲಿ ಕರ್ತವ್ಯದಲ್ಲಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಸರ್ಕಾರ ಆದೇಶ.!

ಬೆಂಗಳೂರು : ಸರಿಯಾಗಿ ಜನರ ಮನವಿಗೆ ಸ್ಪಂದಿಸದೆ ಐದು ವರ್ಷಗಳಿಂದ ಒಂದೇ ಸ್ಥಳದಲ್ಲಿ ಮತ್ತು ಒಂದೇ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮತ್ತು ಸಾರ್ವಜನಿಕ ದೂರುಗಳನ್ನು ಹೊಂದಿರುವ ಅಧಿಕಾರಿಗಳ ಪಟ್ಟಿಯನ್ನು ಸಲ್ಲಿಸಲು ಎಲ್ಲಾ ಡಿಸಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದರು.

ಕಳೆದ ಐದು ವರ್ಷಕ್ಕಿಂತ ಹೆಚ್ಚು ಕಾಲ ಒಂದೇ ಸ್ಥಳದಲ್ಲಿ ಕೆಲಸ ಮಾಡುತ್ತಿರುವ ಅಂತಹ ಅಧಿಕಾರಿಗಳ ಪಟ್ಟಿಯನ್ನು ಡಿಸಿಗಳು ಸಿದ್ಧಪಡಿಸಬೇಕು ಮತ್ತು ಅಂತಹ ಅಧಿಕಾರಿಗಳ ವಿರುದ್ಧ ಯಾವುದೇ ದೂರುಗಳಿದ್ದಲ್ಲಿ ಸರ್ಕಾರದ ಗಮನಕ್ಕೆ ತರಬೇಕು ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಅವರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಹಲವು ನೌಕರರು ಮತ್ತು ಅಧಿಕಾರಿಗಳು ಒಂದೇ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದು, ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತಿಲ್ಲ. ಅಂತಹ ಅಧಿಕಾರಿಗಳ ವಿರುದ್ಧವೂ ದೂರುಗಳು ಬಂದಿವೆ. ಇದರಿಂದ ಹೆಚ್ಚೆತ್ತ ಸರಕಾರ ಅಂತಹ ಅಧಿಕಾರಿಗಳನ್ನು ಎತ್ತಂಗಡಿ ಮಾಡಲು ತಯಾರು ನಡೆಸುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular