Thursday, March 12, 2026
Flats for sale
Homeಕ್ರೈಂಬೆಳಗಾವಿ : ಇಬ್ಬ ರು ಅಪ್ರಾಪ್ತ ಬಾಲಕಿಯರ ಮೇಲೆ ಗ್ಯಾಂಗ್‌ರೇಪ್ : ಮೂವರು ಕಾಮುಕರ ಬಂಧನ..!

ಬೆಳಗಾವಿ : ಇಬ್ಬ ರು ಅಪ್ರಾಪ್ತ ಬಾಲಕಿಯರ ಮೇಲೆ ಗ್ಯಾಂಗ್‌ರೇಪ್ : ಮೂವರು ಕಾಮುಕರ ಬಂಧನ..!

ಬೆಳಗಾವಿ : ಇನ್‌ಸ್ಟಾçಗ್ರಾಮ್‌ನಲ್ಲಿ ರೀಲ್ಸ್ ಹರಿಬಿಟ್ಟು ತಮ್ಮಷ್ಟಕ್ಕೆ ತಾವಿದ್ದ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ದುರುಳರು ಗ್ಯಾಂಗ್ ರೇಪ್ ನಡೆಸಿದ ಪ್ರಕರಣ ಬೆಳಗಾವಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ರಾಯಬಾಗ ತಾಲೂಕಿನ ಸವಸುದ್ದಿ ಗ್ರಾಮದ ಬಳಿಯ ಗುಡ್ಡಗಾಡು ಪ್ರದೇಶದಲ್ಲಿ ಇದು ನಡೆದಿದ್ದು ಈ ಸಂಬAಧ ಮೂವರನ್ನು ಬಂಧಿಸಲಾಗಿದೆ ಎಂದು ಎಸ್ಪಿ ಭೀಮಾಶಂಕರ ಗುಳೇದ ತಿಳಿಸಿದ್ದಾರೆ. ಅಭಿಷೇಕ್, ಆದಿಲ್ ಜಮಾದಾರ್ ಮತ್ತು ಚಾಲಕ ಕೌತುಕ್ ಬಡಿಗೇರ ಬಂಧಿತರು.

ಮೂವರು ಸೇರಿಕೊಂಡು ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಎಸ್ಪಿ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು. ಸದ್ಯ ಬಂಧಿತ ಆರೋಪಿಗಳ ಹಿನ್ನೆಲೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದರು.

ಇನ್‌ಸ್ಟಾçಗ್ರಾಮ್‌ನಲ್ಲಿ ರೀಲ್ಸ್ಮಾ ಡುತ್ತಿದ್ದ ಬಾಲಕಿಗೆ ಆರೋಪಿ ಅಭಿಷೇಕ್ ಪರಿಚಯವಾಗಿದ್ದಾನೆ. ಅಷ್ಟೇ ಅಲ್ಲ ಅವಳ ರೀಲ್ಸ್ ಗೆ ಲೈಕ್ ಕೊಟ್ಟು ಸ್ನೇಹ ಬೆಳೆಸಿಕೊಂಡಿದ್ದ. ಒಂದು ಹAತದಲ್ಲಿ ಸವದತ್ತಿಗೆ ಹೋಗುತ್ತಿದ್ದೇನೆ ನೀನು ಬಾ ಎಂದು ಬಾಲಕಿಗೆ ಹೇಳಿದ್ದಾನೆ. ಈತನ ಮಾತು ನಂಬಿ, ಬಾಲಕಿ ತನ್ನ ಸ್ನೇಹಿತೆಯನ್ನು ಕರೆದುಕೊಂಡು ಹಾರೂಗೇರಿ ಬಸ್ ನಿಲ್ದಾಣಕ್ಕೆ ಹೋಗಿದ್ದಾಳೆ. ಅಲ್ಲಿ, ಆರೋಪಿ ಅಭಿಷೇಕ ಮತ್ತಿಬ್ಬರು ಸ್ನೇಹಿತರೊಂದಿಗೆ ಈ ಬಾಲಕಿಯರನ್ನು ತನ್ನ ಕಾರಿನಲ್ಲಿ ಕರೆದುಕೊಂಡು ರಾಯಬಾಗ ತಾಲೂಕಿನ ಸವಸುದ್ದಿ ಗ್ರಾಮದ ಬಳಿಯ ಗುಡ್ಡಗಾಡು ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ ಎಂದು ಎಸ್ಪಿ ವಿವರಿಸಿದರು.

ಈ ಘಟನೆ ಜನವರಿ ೩ರಂದು ಮಧ್ಯಾಹ್ನದ ವೇಳೆಗೆ ನಡೆದಿದೆ. ಆರೋಪಿಗಳು ಮೊಬೈಲ್‌ನಲ್ಲಿ ವಿಡಿಯೋ ಮಾಡಿಕೊಂಡು, ಬಳಿಕ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ. ಮುಂದಿನ ವಾರ ನಮ್ಮೊಂದಿಗೆ ಗೋವಾಕ್ಕೆ ಬರಬೇಕು. ಇಲ್ಲದಿದ್ದರೆ ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಕೂಡ ಹಾಕಿದ್ದರು. ಪೊಲೀಸರಿಗೆ ದೂರು ಕೊಟ್ಟರೆ ಕೊಲೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು ಎಂದು ಎಸ್ಪಿ ವಿವರಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular