ಬೆಳಗಾವಿ : ಬೆಳಗಾವಿಯಲ್ಲಿ ಗಣೇಶ ಉತ್ಸವ ಮೆರವಣಿಗೆ ವೇಳೆ ಅವಘಡ ನಡೆದಿದ್ದು ಗಣಪತಿ ತೆಗೆದುಕೊಂಡು ಹೋಗ್ತಿದ್ದ ವೇಳೆ ರಾತ್ರಿ ಹೊತ್ತು ಪಾಟೀಲ್ ಗಲ್ಲಿಯಲ್ಲಿ ಟ್ರ್ಯಾಕ್ಟರ್ ಹರಿದು ಓರ್ವ ಸಾವನಪ್ಪಿದ ಘಟನೆ ನಡೆದಿದೆ.
ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಮೆರವಣಿಗೆಯಲ್ಲಿ ಸಾಗ್ತಿದ್ದವರ ಮೇಲೆ ಹರಿದಿದ್ದು ಸದಾನಂದ ಚೌಹಾಣ್ ಪಾಟೀಲ್ ಎಂಬವರು ಸಾವನ್ನಪ್ಪಿದ್ದಾರೆ.ಮತ್ತೋರ್ವ ವಿಜಯ ರಾಜಗೋಳ ಎಂಬ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದ್ದು ತನಿಖೆ ನಡೆಯುತ್ತಿದೆ .


