ಬೆಳಗಾವಿ ; ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಉಮೇದುವಾರಿಕೆ ನಿರಾಕರಿಸಿರುವುದನ್ನು ಖಂಡಿಸಿ ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಹಾಲಿ ಶಾಸಕ ಅನಿಲ ಬೆನಕೆ ಬೆಂಬಲಿಗರು ಮಂಗಳವಾರ ತಡರಾತ್ರಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಬೆಳಗಾವಿ ಉತ್ತರ ಕ್ಷೇತ್ರದಿಂದ ಲಿಂಗಾಯತ ಡಾ.ರವಿ ಪಾಟೀಲ್ ಅವರನ್ನು ಅಭ್ಯರ್ಥಿಯನ್ನಾಗಿ ಬಿಜೆಪಿ ಘೋಷಿಸಿರುವುದು ಮರಾಠಾ ಸಮುದಾಯದ ಬೆನಕೆ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಬೆನಕೆ ಬೆಂಬಲಿಗರು ಬಿಜೆಪಿ ವಿರುದ್ಧ ಘೋಷಣೆ ಕೂಗಿ ಅನ್ಯಾಯ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೆನಕೆ ಯಾವುದೇ ತಾರತಮ್ಯವಿಲ್ಲದೆ ಕ್ಷೇತ್ರದಾದ್ಯಂತ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಿದ್ದು, ಚುನಾವಣೆಗೆ ಸ್ಪರ್ಧಿಸಲು ಅವರಿಗೆ ಅವಕಾಶ ನೀಡಬೇಕು ಎಂದು ಅವರು ಪ್ರತಿಪಾದಿಸಿದರು. ಪಕ್ಷದೊಂದಿಗೆ ನಿಂತ ಮರಾಠ ಸಮುದಾಯಕ್ಕೂ ಅನ್ಯಾಯವಾಗಿದೆ ಎಂದರು.