ಬೆಳಗಾವಿ: ವಿಷಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸಾಲಹಳ್ಳಿಯಲ್ಲಿರುವ ಸರ್ಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ವಿಷಹಾರ ಸೇವಿಸಿ 5 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಬೆಳಿಗ್ಗೆ ರೈಸ್ ಫಲಾವ್ ಸೇವಿಸಿದಾಗ ಫಲಾವ್ ನಲ್ಲಿ ಹುಳುಗಳು ಪತ್ತೆಯಾಗಿದೆ. ಫಲಾವ್ ಸೇವಿಸಿದ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಪೈಕಿ 5 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರವಾಗಿ ಅಸ್ವಸ್ಥರಾಗಿದ್ದಾರೆ. ಕೂಡಲೇ ಅವರನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಯಿತು. ಪ್ರಥಮ ಚಿಕಿತ್ಸೆ ನೀಡಿದ ಬಳಿಕ ವೈದ್ಯರ ಸಲಹೆ ಮೇರೆಗೆ ರಾಮದುರ್ಗ ತಾಲೂಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ವಿದ್ಯಾರ್ಥಿಗಳು ವಸತಿ ಶಾಲೆಯ ಅವ್ಯವಸ್ಥೆ, ಅಸ್ತವ್ಯಸ್ತದ ಕುರಿತು ಹಲವು ಬಾರಿ ಮೇಲಾಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನ ಆಗಿಲ್ಲ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸ್ಥಳಿಯರು ಆಗಮಿಸಿ ವಸತಿ ನಿಲಯ ಸಿಬ್ಬಂದಿಗಳನ್ನ ತರಾಟೆಗೆ ತೆಗೆದುಕೊಂಡರು. ವಿದ್ಯಾರ್ಥಿಗಳು ಕೂಡ ವಸತಿ ಶಾಲೆ ಅವ್ಯವಸ್ಥೆ ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯ ವಿರುದ್ಧ ವಸತಿ ಶಾಲೆ ಮುಂದೆ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.


