Monday, July 6, 2026
Homeಕ್ರೈಂಬೆಳ್ತಂಗಡಿ : ಕ್ಯಾಂಟಿನ್‌ನಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಪೊಲೀಸ್‌ ದಾಳಿ : ಪ್ರಕರಣ...

ಬೆಳ್ತಂಗಡಿ : ಕ್ಯಾಂಟಿನ್‌ನಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಪೊಲೀಸ್‌ ದಾಳಿ : ಪ್ರಕರಣ ದಾಖಲು.

ಬೆಳ್ತಂಗಡಿ : ತಾಲೂಕಿನ ಕಸಬಾ ಗ್ರಾಮದ ಕೆಇಬಿ ರಸ್ತೆಯಲ್ಲಿರುವ “ಪವನ್” ಹೆಸರಿನ ಕ್ಯಾಂಟಿನ್‌ನಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕ್ಯಾಂಟಿನ್‌ ನಡೆಸುತ್ತಿದ್ದ ಸುಂದರ್ ಶೆಟ್ಟಿ ಹಾಗೂ ಅವರ ಪರಿಚಯದ ಉಸ್ಮಾನ್ ಎಂಬವರು ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಕ್ಯಾಂಟಿನ್‌ನ ಒಳ ಕೋಣೆಯಲ್ಲಿ ಮಹಿಳೆಯರನ್ನು ಕರೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎನ್ನಲಾಗಿದೆ.

ಈ ಬಗ್ಗೆ ಸಿಕಂದ‌ರ್ ಪಾಷಾ, ಪೊಲೀಸ್ ಉಪನಿರೀಕ್ಷಕರು (ತನಿಖೆ), ಬೆಳ್ತಂಗಡಿ ಪೊಲೀಸ್ ಠಾಣೆಗೆ ಮಾಹಿತಿ ಲಭಿಸಿದ್ದು, ಗುಪ್ತವಾಗಿ ಪರಿಶೀಲಿಸಿದಾಗ ಅಕ್ರಮ ಚಟುವಟಿಕೆ ನಡೆಯುತ್ತಿರುವುದು ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ ಮೇ 10, 2026ರಂದು ಸಂಜೆ ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ರವಿ ಬಿ.ಎಸ್ ನೇತೃತ್ವದಲ್ಲಿ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ದಾಳಿ ನಡೆಸಲಾಗಿದೆ.

ಘಟನೆಗೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರಮ ಸಂಖ್ಯೆ 48/2026ರಡಿ ಐಟಿಪಿ ಕಾಯ್ದೆಯ ಕಲಂ 3, 4, 5 ಹಾಗೂ ಬಿಎನ್‌ಎಸ್ ಕಲಂ 143(2) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular