ಬೆಳ್ತಂಗಡಿ : ತಾಲೂಕಿನಲ್ಲಿ ಭೀಕರ ಕೊಲೆ ನಡೆದಿದ್ದು, 73ರ ಹರೆಯದ ವ್ಯಕ್ತಿಯೋರ್ವನನ್ನು ತನ್ನ ತೋಟದಲ್ಲಿಯೇ ಬರ್ಬರವಾಗಿ ಕಡಿದು ಕೊಲೆ ಮಾಡಲಾದ ಘಟನೆ ಬೆಳಾಲು ಗ್ರಾಮದ ಎಸ್ಪಿಬಿ ಕಂಪೌಂಡ್ ನಲ್ಲಿ ನಡೆದಿದೆ.
ಮೃತರನ್ನು ಎಸ್ ಪಿ ಬಿ ಬಾಲಕೃಷ್ಣ ಭಟ್ ಎಂದು ಗುರುತಿಸಲಾಗಿದ್ದು, ಇವರು ಕೋಲ್ಪಾಡಿ ಮತ್ತು ಕೊಯ್ಯೂರು ಸರಕಾರಿ ಶಾಲೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತ ಸರಕಾರಿ ಶಾಲೆಯ ಶಿಕ್ಷಕರಾಗಿದ್ದಾರೆ. ಮಂಗಳವಾರ ಮಧ್ಯಾಹ್ನದ ನಂತರ ಕೊಲೆ ನಡೆದಿದ್ದು ಕೊಲೆಗೆ ನಿಖರಕಾರಣ ಇನ್ನು ತಿಳಿದುಬಂದಿಲ್ಲ .
ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಂತ್ರಸ್ತೆ ಇಬ್ಬರು ಪುತ್ರರನ್ನು ಅಗಲಿದ್ದು, ಒಬ್ಬರು ಬೆಂಗಳೂರಿನಲ್ಲಿ ನೆಲೆಸಿದ್ದು, ಮತ್ತೊಬ್ಬರು ಪುತ್ತೂರಿನಲ್ಲಿ ಉದ್ಯೋಗದಲ್ಲಿದ್ದು, ವಿವಾಹಿತ ಪುತ್ರಿ ಇದ್ದಾರೆ. ಶಿಕ್ಷಕಿಯೂ ಆಗಿದ್ದ ಅವರ ಪತ್ನಿ ಐದು ವರ್ಷಗಳ ಹಿಂದೆ ನಿಧನರಾಗಿದ್ದರು.


