Saturday, March 14, 2026
Flats for sale
Homeಜಿಲ್ಲೆಬೆಳ್ತಂಗಡಿ : ಧರ್ಮಸ್ಥಳದ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದ ಯೂಟ್ಯೂಬರ್‌ಗಳಿಗೆ ಭಕ್ತರಿಂದ ಧರ್ಮದೇಟು,ಪ್ರಕರಣ ದಾಖಲು..!

ಬೆಳ್ತಂಗಡಿ : ಧರ್ಮಸ್ಥಳದ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದ ಯೂಟ್ಯೂಬರ್‌ಗಳಿಗೆ ಭಕ್ತರಿಂದ ಧರ್ಮದೇಟು,ಪ್ರಕರಣ ದಾಖಲು..!

ಬೆಳ್ತಂಗಡಿ : ಧರ್ಮಸ್ಥಳದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದ ಯೂಟ್ಯೂಬರ್‌ಗಳಿಗೆ ಭಕ್ತರಿಂದ ಧರ್ಮದೇಟು ನೀಡಿದ ಘಟನೆ ನಿನ್ನೆ ನಡೆದಿದೆ. ಮೂವರು ಯೂಟ್ಯೂಬರ್‌ ಗಳನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಧರ್ಮಸ್ಥಳದ ಕುರಿತು ಅವಹೇಳನ ಮಾಡುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಭಕ್ತರಿಂದ ಪ್ರತಿಭಟನೆ ನಡೆದಿದ್ದು ಸ್ಥಳದಲ್ಲಿ ವಾತಾವರಣ ಭುಗಿಲೆದ್ದಿದೆ.

ಧರ್ಮಸ್ಥಳದಲ್ಲಿ ಇಂದು ನಡೆದ ಘರ್ಷಣೆಗೆ ಸಂಬಂಧಿಸಿದಂತೆ,ಸ್ಥಳದಲ್ಲಿ ಪರಿಸ್ಥಿತಿ ಪ್ರಸ್ತುತ ಶಾಂತವಾಗಿದ್ದು, ಸೇರಿದ್ದ ಜನರನ್ನು ಚದುರಿಸಲಾಗಿದೆ.ಹಾಗೂ ಘಟನೆಗೆ ಸಂಬಂಧಿಸಿ ದಾಖಲಾಗಿರುವ ಪ್ರಕರಣ ದಾಖಲಾಗಿದೆ ಎಂದು ಜಿಲ್ಲೆಯ ಪೊಲೀಸ್ ವರಿಷ್ಟ ಅಧಿಕಾರಿ ತಿಳಿಸಿದ್ದಾರೆ.

ಈ ಬಗ್ಗೆ ಯೂಟ್ಯೂಬರ್‌ಗಳ ಮೇಲೆ ನಡೆದ ಹಲ್ಲೆ ಮತ್ತು ಅವರುಗಳ ಎರಡು ವಾಹನಗಳಿಗೆ ಹಾನಿ‌ ನಡೆಸಿದ ಬಗ್ಗೆ ಹಾಗೂ ಖಾಸಗಿ ನ್ಯೂಸ್ ಚಾನೆಲ್ ನ ವರದಿಗಾರನ ಮೇಲೆ ನಡೆದ ಹಲ್ಲೆ ಸಂಬಂಧಿಸಿದಂತೆ ಪ್ರಕರಣವನ್ನು ದಾಖಲಿಸಲಾಗಿದೆ.

ಧರ್ಮಸ್ಥಳ ಪಾಂಗಾಳದಲ್ಲಿ (ಲಾಠಿ ಚಾರ್ಜ್ ನಡೆದ ಸ್ಥಳದಲ್ಲಿ), ಧರ್ಮಸ್ಥಳ ಪೊಲೀಸ್ ಠಾಣಾ ಆವರಣದಲ್ಲಿ ಮತ್ತು ಆಸ್ಪತ್ರೆಯ ಮುಂದೆ ಕಾನೂನುಬಾಹಿರ ಗುಂಪು ಸೇರಿರುವ ಬಗ್ಗೆ ಪ್ರಕರಣ ದಾಖಲಿಸಿದ್ದು ಹಲ್ಲೆಗೊಳಗಾದವರು ಚಿಕಿತ್ಸೆಗಾಗಿ ದಾಖಲಾಗಿರುವ ಆಸ್ಪತ್ರೆಯ ವೈದ್ಯರೊಂದಿಗೆ ವಿಚಾರಿಸಲಾಗಿ, ಪ್ರಾಥಮಿಕ ಆರೋಗ್ಯ ತಪಾಸಣೆಯಲ್ಲಿ ಯಾವುದೇ ಗಂಭೀರ ಗಾಯಗಳಾಗಿರುವುದು ಕಂಡುಬಂದಿಲ್ಲ ಎಂಬುದಾಗಿ ಮೌಖಿಕವಾಗಿ ತಿಳಿಸಿರುತ್ತಾರೆ ಎಂದು ಮಾಹಿತಿ ತಿಳಿದುಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular