Thursday, November 12, 2026
Homeಜಿಲ್ಲೆಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಬಳಿ ರಾಜ್ಯ ಹೆದ್ದಾರಿ ಬದಿಯಲ್ಲಿ ಮಾನವ ತಲೆಬುರುಡೆ...

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಬಳಿ ರಾಜ್ಯ ಹೆದ್ದಾರಿ ಬದಿಯಲ್ಲಿ ಮಾನವ ತಲೆಬುರುಡೆ ಪತ್ತೆ..!

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಬಳಿ ರಾಜ್ಯ ಹೆದ್ದಾರಿ ಬದಿಯಲ್ಲಿ ಮಾನವ ತಲೆಬುರುಡೆಯೊಂದು ಪತ್ತೆಯಾಗಿರುವ ಘಟನೆ ನ.12ರ ಸಂಜೆ ಬೆಳಕಿಗೆ ಬಂದಿದೆ.

ಬಂಟ್ವಾಳ ಮೂಲದ ವ್ಯಕ್ತಿಯೋರ್ವರು ವಿದ್ಯುತ್ ಕಂಬಗಳಿಗೆ ಅಡ್ಡವಾಗಿದ್ದ ಮರದ ರೆಂಬೆಗಳನ್ನು ಕತ್ತರಿಸುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದ ಸಂದರ್ಭದಲ್ಲಿ ಹೆದ್ದಾರಿ ಬದಿಯಲ್ಲಿ ಮಾನವ ದೇಹದ ಬುರುಡೆಯೊಂದು ಕಂಡುಬಂದಿದೆ.

ಈ ಹಿನ್ನೆಲೆಯಲ್ಲಿ ಅವರು ನ.12ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದಾರೆ.

ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸರು ದೂರು ಸಂಖ್ಯೆ 422/2026ರ ಅಡಿಯಲ್ಲಿ ಅರ್ಜಿಯನ್ನು ಸ್ವೀಕರಿಸಿದ್ದು, ಈ ಕುರಿತು ವಿಚಾರಣೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ಮಾನವ ಬುರುಡೆ ಪತ್ತೆಯಾಗಿರುವ ಘಟನೆ ಸ್ಥಳೀಯರಲ್ಲಿ ಕುತೂಹಲ ಹಾಗೂ ಆತಂಕಕ್ಕೆ ಕಾರಣವಾಗಿದೆ. ಬುರುಡೆಯ ಮೂಲ ಮತ್ತು ಇತರ ವಿವರಗಳು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular