Wednesday, July 15, 2026
Homeಜಿಲ್ಲೆಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಪ್ರಕರಣ : SIT ಅಂತಿಮ ವರದಿ ಕೋರ್ಟ್‌ಗೆ ಸಲ್ಲಿಕೆ.

ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಪ್ರಕರಣ : SIT ಅಂತಿಮ ವರದಿ ಕೋರ್ಟ್‌ಗೆ ಸಲ್ಲಿಕೆ.

ಬೆಳ್ತಂಗಡಿ : ಧರ್ಮಸ್ಥಳದ ಬಹುಚರ್ಚಿತ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ಬೆಳ್ತಂಗಡಿ ನ್ಯಾಯಾಲಯಕ್ಕೆ 7,005 ಪುಟಗಳ ಅಂತಿಮ ವರದಿಯನ್ನು ಸಲ್ಲಿಸಿದೆ.

ಸಾರ್ವಜನಿಕ ಅಭಿಯೋಜಕ ಶಶಾಂಕ್ ನಾಗೇಂದ್ರ ಭಟ್ ಅವರು ನ್ಯಾಯಾಲಯಕ್ಕೆ 12 ಫೈಲ್‌ಗಳಲ್ಲಿ ಅಂತಿಮ ವರದಿ ಸಲ್ಲಿಸಿದರು. ವರದಿಯೊಂದಿಗೆ 255 ಸಾಕ್ಷಿಗಳ ಹೇಳಿಕೆಗಳನ್ನು ಒಳಗೊಂಡ ಹಾರ್ಡ್ ಡಿಸ್ಕ್, ಬುರುಡೆ, ಅಸ್ಥಿಪಂಜರ, ಮೊಬೈಲ್ ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದ ವಸ್ತುಗಳು ಹಾಗೂ FSL ವರದಿಗಳನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಈ ಪ್ರಕರಣದಲ್ಲಿ 2025ರ ಆಗಸ್ಟ್ 28ರಂದು ಪ್ರಮುಖ ಆರೋಪಿ ಚೆನ್ನಯ್ಯನನ್ನು SIT ಬಂಧಿಸಿತ್ತು. ಈ ಹಿಂದೆ ಆರು ಮಂದಿ ವಿರುದ್ಧ 3,923 ಪುಟಗಳ ಮಧ್ಯಂತರ ವರದಿ ಸಲ್ಲಿಸಲಾಗಿತ್ತು. ಇದೀಗ ಹೆಚ್ಚುವರಿಯಾಗಿ 3,082 ಪುಟಗಳನ್ನು ಸೇರಿಸಿ ಒಟ್ಟು 7,005 ಪುಟಗಳ ಸಮಗ್ರ ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular