ಬೆಳ್ತಂಗಡಿ ; ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ತನ್ನ ಅಭ್ಯರ್ಥಿಯಾಗಿ ರಕ್ಷಿತ್ ಶಿವರಾಮ್ ಅವರನ್ನು ಕಣಕ್ಕಿಳಿಸಿದೆ. ಇವರು ಪ್ರಬಲ ಬಿಲ್ಲವ ಸಮುದಾಯಕ್ಕೆ ಸೇರಿದವರು. ಹಾಗಾಗಿಯೇ ಅವರ ಗೆಲುವಿಗೆ ಬಿಲ್ಲವರು ಹರಸಾಹಸ ಪಡುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಹರೀಶ್ ಪೂಂಜಾ ಅವರಿಗೆ ಈ ಬಾರಿ ಗೆಲುವು ಕಠಿಣವಾಗಲಿದೆ ಎಂದು ಹೇಳಲಾಗುತ್ತಿದೆ.
ರಕ್ಷಿತ್ ಶಿವರಾಮ್ ತಮ್ಮ ಸಾಮಾಜಿಕ ಕಾರ್ಯಗಳಿಗೆ ಹೆಸರುವಾಸಿಯಾಗಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಅಖಾಡಕ್ಕಿಳಿಯುವ ಉದ್ದೇಶದಿಂದ ತಮ್ಮ ಕ್ಷೇತ್ರದಲ್ಲಿ ಚುಣಾವಣೆ ನಿಗದಿ ಪಡಿಸುವ ಮೊದಲೆ ಚೆನ್ನಾಗಿಯೇ ಕೆಲಸ ಮಾಡಿದ್ದರು.
ಹರೀಶ್ ಪೂಂಜಾ ಅವರ ಕ್ಷೇತ್ರದಲ್ಲೂ ಉತ್ತಮ ಕೆಲಸ ಮಾಡಿದ್ದಾರೆ. ಆದರೆ, ಪಕ್ಷದಲ್ಲಿಯೂ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಬಿಲ್ಲವರು ಕೂಡ ತಮ್ಮ ರಾಜಕೀಯ ಭೇದ ಮರೆತು ತಮ್ಮ ಸಮುದಾಯದ ಅಭ್ಯರ್ಥಿ ರಕ್ಷಿತ್ ಅವರನ್ನು ಗೆಲ್ಲಿಸಲು ಒಗ್ಗಟ್ಟಾಗಿದ್ದಾರೆ ಎಂದು ತಿಳಿದುಬಂದಿದೆ.
ರಕ್ಷಿತ್ ಮತ್ತು ಅವರ ಕುಟುಂಬದ ಪ್ರಭಾವವು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸ್ಪರ್ಧೆಯಲ್ಲಿ ಕಾಂಗ್ರೆಸ್ ಅಲೆಗೆ ದಾರಿ ಮಾಡಿಕೊಟ್ಟಿದೆ ಎಂದು ಹೇಳಲಾಗುತ್ತದೆ.
ಅರಣ್ಯಾಧಿಕಾರಿ ಸಂಧ್ಯಾ ಸಚಿನ್ ಅವರನ್ನು ಬೀದರ್‌ಗೆ ವರ್ಗಾವಣೆ ಮಾಡುವಂತೆ ಕೋರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಹರೀಶ್ ಪೂಂಜಾ ಅವರ ಶಾರ್ಟ್ ಟೆಂಪರ್ ಅವರ ಸ್ಥಾನಮಾನಕ್ಕೆ ಧಕ್ಕೆ ತಂದಿದೆ.
ಕಳೆದ ಕೆಳ ದಿನಗಳಿಂದ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ರಕ್ಷಿತ್ ಆದ್ಯತೆ ಮೇರೆಗೆ ಸ್ಪಂದಿಸುತ್ತಿದ್ದಾರೆ. ಕ್ಷೇತ್ರದ ನಿವಾಸಿಗಳು ರಕ್ಷಿತ್ ಅವರ ಈ ಪ್ರಯತ್ನವನ್ನು ಶ್ಲಾಘಿಸುತ್ತಿದ್ದಾರೆ ಮತ್ತು ಟ್ಯಾಂಕರ್‌ಗಳಲ್ಲಿ ನೀರು ಸರಬರಾಜು ಮಾಡುವ ಮೂಲಕ ಅವರು ಕೆಲಸ ಮಾಡುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ.