ಬೆಳ್ತಂಗಡಿ : ಮನೆಯಿಂದ ರಸ್ತೆಗೆ ಓಡಿ ಬಂದ ಮಗುವಿಗೆ ಆಟೋರಿಕ್ಷಾ ಡಿಕ್ಕಿ ಹೊಡೆದು ಮೂರು ವರ್ಷದ ಮಗು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ.
ಪಣಕಜೆ ಮುಂಡಾಡಿ ನಿವಾಸಿಗಳಾದ ಚಂದ್ರಶೇಖರ್ ಮತ್ತು ಉಷಾ ದಂಪತಿಯ ಪುತ್ರ ಕೌಶಿಕ್ ಕೌಶಿಕ್ ಎಂದು ತಿಳಿದುಬಂದಿದೆ.
ಪಣಕಜೆ ಮುಖ್ಯ ರಸ್ತೆಗೆ ಹೊಂದಿಕೊಂಡಂತೆ ಚಂದ್ರಶೇಖರ್ ಅವರ ನಿವಾಸವಿದ್ದು ಮಗು ಇದ್ದಕ್ಕಿದ್ದಂತೆ ರಸ್ತೆಯ ಕಡೆಗೆ ಓಡಿದೆ , ಆ ಸಂದರ್ಭದಲ್ಲಿ ಆಟೋರಿಕ್ಷಾ ಮಗುವಿಗೆ ಡಿಕ್ಕಿ ಹೊಡೆದಿದೆ .ತಕ್ಷಣ ಉಜಿರೆಯ ಖಾಸಗಿ ಆಸ್ಪತ್ರೆಗೆ ಮತ್ತು ನಂತರ ಮಂಗಳೂರಿಗೆ ಸಾಗಿಸಲು ಪ್ರಯತ್ನಿಸಿದರೂ, ಮಗು ಆಸ್ಪತ್ರೆಯಲ್ಲಿ ಸಾವನ್ನಪ್ಪಿದೆ.
ಬೆಳ್ತಂಗಡಿ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು,ತನಿಖೆ ನಡೆಸುತ್ತಿದ್ದಾರೆ.


