Wednesday, August 12, 2026
Homeಜಿಲ್ಲೆಬೆಳ್ತಂಗಡಿ : ಮಹಿಳಾ ನೌಕರಿಗೆ ಲೈಂಗಿಕ ಕಿರುಕುಳ ಆರೋಪ : ಬೆಳ್ತಂಗಡಿ ಆಸ್ಪತ್ರೆಯ ಫಾರ್ಮಸಿ ಅಧಿಕಾರಿ...

ಬೆಳ್ತಂಗಡಿ : ಮಹಿಳಾ ನೌಕರಿಗೆ ಲೈಂಗಿಕ ಕಿರುಕುಳ ಆರೋಪ : ಬೆಳ್ತಂಗಡಿ ಆಸ್ಪತ್ರೆಯ ಫಾರ್ಮಸಿ ಅಧಿಕಾರಿ ಚಂದ್ರಶೇಖರ್ ಅಮಾನತು.

ಮಂಗಳೂರು : ಬೆಳ್ತಂಗಡಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಫಾರ್ಮಸಿ ಅಧಿಕಾರಿ ಚಂದ್ರಶೇಖರ್ ಅವರನ್ನು ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ ಅಮಾನತುಗೊಳಿಸಿದೆ.

ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ ಗ್ರೂಪ್-ಡಿ ಮಹಿಳಾ ನೌಕರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಕುರಿತು ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಸಲ್ಲಿಸಿದ್ದ ವರದಿ ಹಾಗೂ ನಂತರ ಸಲ್ಲಿಸಲಾದ ತನಿಖಾ ದಾಖಲೆಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ ಪರಿಶೀಲಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿರುವುದು, ಸಾಕ್ಷಿದಾರರ ಲಿಖಿತ ಹೇಳಿಕೆಗಳು ಹಾಗೂ ಲಭ್ಯ ದಾಖಲೆಗಳ ಆಧಾರದ ಮೇಲೆ ಆರೋಪವು ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ಪರಿಗಣಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳಡಿ ಇಲಾಖಾ ವಿಚಾರಣೆ ಬಾಕಿ ಇರಿಸಿ ಚಂದ್ರಶೇಖರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಅಮಾನತ್ತಿನ ಅವಧಿಯಲ್ಲಿ ಅವರ ಲೀನ್ ಅನ್ನು ಹಾಸನ ಜಿಲ್ಲೆಯ ಸಾಲಗಾಮೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವರ್ಗಾಯಿಸಲಾಗಿದೆ. ಅಲ್ಲದೆ, ನಿಯಮಾನುಸಾರ ಜೀವನಾಧಾರ ಭತ್ಯೆಗೆ ಅವರು ಅರ್ಹರಾಗಿದ್ದು, ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಕೇಂದ್ರ ಸ್ಥಾನ ತೊರೆಯಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಆದೇಶವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕಿ ಡಾ. ರಜನಿ ಎಂ. ಅವರು ಜೂನ್ 23ರಂದು ಹೊರಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular