ಬೆಳ್ತಂಗಡಿ ; ಖಾಸಗಿ ಬಸ್ಸೊಂದು ರಸ್ತೆ ಬದಿಯ ಗುಡ್ಡದ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳಾ ಪ್ರಯಾಣಿಕರು ಸಾವನ್ನಪ್ಪಿ ಐವರು ಗಾಯಗೊಂಡಿರುವ ದಾರುಣ ಘಟನೆ ತಾಲೂಕಿನ ನಾವೂರು ಬಳಿ ಶನಿವಾರ ನಡೆದಿದೆ. ಬಸ್ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ಸಂಭವಿಸಿದೆ.
ಮೃತರನ್ನು ಇಂದಬೆಟ್ಟು ಗ್ರಾಮದ ಸುಂದರಿ (60) ಎಂದು ಗುರುತಿಸಲಾಗಿದೆ.
ಗಾಯಗೊಂಡಿರುವ ಐವರು ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.