Thursday, July 23, 2026
Homeಜಿಲ್ಲೆಬೆಳ್ತಂಗಡಿ : ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ,ಯುವ ಉದ್ಯಮಿ ಸಾವು !

ಬೆಳ್ತಂಗಡಿ : ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ,ಯುವ ಉದ್ಯಮಿ ಸಾವು !

ಬೆಳ್ತಂಗಡಿ ; ಉಜಿರೆ ಕಾಲೇಜು ರಸ್ತೆಯ ಬೆಳಾಲ್ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಘಟನೆ ಜೂ.29ರ ಶನಿವಾರ ಮುಂಜಾನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ಚಾಲಕನನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾನೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಮೃತರನ್ನು ಬೆಳ್ತಂಗಡಿ ನಿವಾಸಿ ಪ್ರಜ್ವಲ್ ನಾಯಕ್ ಎಂದು ಗುರುತಿಸಲಾಗಿದೆ. ಅಪಘಾತವಾದ ತಕ್ಷಣ ಪ್ರಜ್ವಲ್‌ನನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ನಂತರ ಮಂಗಳೂರಿಗೆ ಸ್ಥಳಾಂತರಿಸಲಾಯಿತು. ಆದಾಗ್ಯೂ, ಅವರು ರಸ್ತೆ ಮದ್ಯೆ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.ಈ ದುರ್ಘಟನೆಗೆ ನಿಖರ ಕಾರಣ ಇನ್ನು ತಿಳಿದುಬಂದಿಲ್ಲ. ಅತಿಯಾದ ವೇಗದಿಂದ ಬಂದ ಕಾರು ಕಂಬಗಳಿಗೆ ಡಿಕ್ಕಿ ಹೊಡೆದ ಪರಿಣಾಮ ದಾರಿ ದೀಪದ ಕಂಬ ಹಾಗೂ ರಸ್ತೆ ವಿಬಾಜಕ ಸಂಪೂರ್ಣ ನಜ್ಜುಗುಜ್ಜಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular