Sunday, July 19, 2026
Homeಜಿಲ್ಲೆಬೆಳ್ತಂಗಡಿ : ಶಿರಾಡಿ ಘಾಟ್ ನಲ್ಲಿ ಕೆಎಸ್ ಆರ್ ಟಿಸಿ ಬಸ್-ಕಾರು ಮುಖಾಮುಖಿ ಡಿಕ್ಕಿ, ಮೂವರು...

ಬೆಳ್ತಂಗಡಿ : ಶಿರಾಡಿ ಘಾಟ್ ನಲ್ಲಿ ಕೆಎಸ್ ಆರ್ ಟಿಸಿ ಬಸ್-ಕಾರು ಮುಖಾಮುಖಿ ಡಿಕ್ಕಿ, ಮೂವರು ಸಾವು.

ಬೆಳ್ತಂಗಡಿ : ಶಿರಾಡಿ ಘಾಟ್‌ನಲ್ಲಿ ಶುಕ್ರವಾರ ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ.ಮೃತರನ್ನು ಕೊಕ್ಕಡದ ಉದ್ಯಮಿ ಚಂದ್ರಶೇಖರ್, ಕಕ್ಕಿಂಜೆಯ ಶ್ರೀಧರ್ ಮತ್ತು ಜನಾರ್ಧನ್ ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಅವರು ತೀವ್ರ ಗಾಯಗೊಂಡು ನಂತರ ಸಾವನ್ನಪ್ಪಿದ್ದಾರೆ.ಕಾರಿನಲ್ಲಿದ್ದ ಇತರ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಮತ್ತು ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಪರಿಣಾಮ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular