Saturday, September 26, 2026
Homeಜಿಲ್ಲೆಮಂಗಳೂರು : ಅಂಗನವಾಡಿ ಕಾರ್ಯಕರ್ತೆಯರ ವಿವಿಧ ಬೇಡಿಕೆ : ಸೆ.28ರಂದು ಮಂಗಳೂರಿನಲ್ಲಿ ಮುಷ್ಕರ.

ಮಂಗಳೂರು : ಅಂಗನವಾಡಿ ಕಾರ್ಯಕರ್ತೆಯರ ವಿವಿಧ ಬೇಡಿಕೆ : ಸೆ.28ರಂದು ಮಂಗಳೂರಿನಲ್ಲಿ ಮುಷ್ಕರ.

ಮಂಗಳೂರು : ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ವತಿಯಿಂದ ಸೆಪ್ಟೆಂಬರ್ 28ರಂದು ಮಂಗಳೂರಿನಲ್ಲಿ ಪ್ರತಿಭಟನೆ ಹಾಗೂ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷೆ ತಾರಾ ಬಲ್ಲಾಳ್ ತಿಳಿಸಿದ್ದಾರೆ.

ಅಂಗನವಾಡಿ ಕೇಂದ್ರಗಳು ಆರಂಭವಾಗಿ 50 ವರ್ಷ ಕಳೆದರೂ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಅತ್ಯಲ್ಪ ಗೌರವಧನದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಸಂಘ ಆರೋಪಿಸಿದೆ. ಪ್ರಸ್ತುತ ಕಾರ್ಯಕರ್ತೆಯರಿಗೆ ₹12,000 ಹಾಗೂ ಸಹಾಯಕಿಯರಿಗೆ ₹6,000 ಗೌರವಧನ ನೀಡಲಾಗುತ್ತಿದ್ದು, ಅದೂ ಎರಡು–ಮೂರು ತಿಂಗಳಿಗೊಮ್ಮೆ ಪಾವತಿಯಾಗುತ್ತಿದೆ ಎಂದು ತಿಳಿಸಿದೆ.

ಪ್ರತಿ ತಿಂಗಳ 5ನೇ ತಾರೀಖಿನೊಳಗೆ ಗೌರವಧನ ಪಾವತಿಸಬೇಕು. ಫಲಾನುಭವಿಗಳಿಗೆ ನೀಡುವ ಮೊಟ್ಟೆಗೆ ಸಮರ್ಪಕವಾಗಿ ಹಣ ಬಿಡುಗಡೆ ಮಾಡಬೇಕು. ಕಳಪೆ ಗುಣಮಟ್ಟದ ಸಮವಸ್ತ್ರ ಬದಲಿಸಿ, ಸರ್ಕಾರ ನಿಗದಿಪಡಿಸುವ ಮೊತ್ತಕ್ಕೆ ಅನುಗುಣವಾಗಿ ಗುಣಮಟ್ಟದ ಸಮವಸ್ತ್ರ ಒದಗಿಸಬೇಕು ಎಂದು ಸಂಘ ಆಗ್ರಹಿಸಿದೆ.

ಇದರೊಂದಿಗೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ESI ಅಥವಾ ಆರೋಗ್ಯ ವಿಮೆ, ಅಂಗನವಾಡಿ ಕೇಂದ್ರಗಳಿಗೆ ಅಗತ್ಯ ವಸ್ತುಗಳ ಖರೀದಿಗಾಗಿ ಸಮರ್ಪಕ ಸಾದಿಲ್ವಾರು ಹಣ ಹಾಗೂ 2011ರಿಂದ ನಿವೃತ್ತರಾದ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಹಣ ನೀಡಬೇಕು ಎಂದು ಬೇಡಿಕೆ ಇಡಲಾಗಿದೆ. ಪೋಷಣ್ ಟ್ರಾಕರ್ಕೆ ನಲ್ಲಿ ಕೆಲಸ ನಿರ್ವಹಿಸಲು ಉತ್ತಮ ಗುಣಮಟ್ಟದ 5G ಮೊಬೈಲ್ ಒದಗಿಸಬೇಕು ಎಂಬುದೂ ಸಂಘದ ಪ್ರಮುಖ ಬೇಡಿಕೆಯಾಗಿದೆ. ಜ್ಯೋತಿ ವೃತ್ತದಿಂದ ಮಿನಿ ವಿಧಾನಸೌಧದವರೆಗೆ ಜಾಥಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆಪ್ಟೆಂಬರ್ 28ರಂದು ಬೆಳಗ್ಗೆ ಜ್ಯೋತಿ ವೃತ್ತದಿಂದ ಮಿನಿ ವಿಧಾನಸೌಧದವರೆಗೆ ಜಾಥಾ ನಡೆಸಲಾಗುವುದು. ಬಳಿಕ ಮಿನಿ ವಿಧಾನಸೌಧದ ಬಳಿ ಪ್ರತಿಭಟನೆ ಹಾಗೂ ಮುಷ್ಕರ ನಡೆಸಲು ನಿರ್ಧರಿಸಲಾಗಿದೆ ಎಂದು ಸಂಘ ತಿಳಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಆಶಾಲತಾ ಎಂ.ವಿ. ಸೇರಿದಂತೆ ಸಂಘದ ಇತರೆ ಸದಸ್ಯರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular