ಮಂಗಳೂರು ; ಅಕ್ರಮ ಗೋಸಾಗಾಟದ ಮಾಡುತ್ತಿದ್ದ ಕಾರು ಪಲ್ಟಿಯಾದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ.

ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದ ಎರಡು ಗೋವುಗಳ ರಕ್ಷಣೆ ಮಾಡಲಾಗಿದೆ.
ಓಮಿನಿ ಕಾರೊಂದರಲ್ಲಿ ಅಮಾನುಷವಾಗಿ ಗೋ ಸಾಗಾಟದ ಮಾಡುತ್ತಿದ್ದ ಕಾರು ಕಂಬಳ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಗೋಸಾಗಾಟ ಮಾಡುತ್ತಿದ್ದ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಘಟನೆಯಲ್ಲಿ ಕಾರು ನಜ್ಜುಗುಜ್ಜಾಗಿದೆ.
ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.