Saturday, May 16, 2026
Flats for sale
Homeಜಿಲ್ಲೆಮಂಗಳೂರು ; ಅಕ್ರಮ ಜಾನುವಾರು ಸಾಗಾಟ ಪತ್ತೆ ,27ಕ್ಕೂ ಅಧಿಕ ಕೋಣಗಳ ರಕ್ಷಣೆ.

ಮಂಗಳೂರು ; ಅಕ್ರಮ ಜಾನುವಾರು ಸಾಗಾಟ ಪತ್ತೆ ,27ಕ್ಕೂ ಅಧಿಕ ಕೋಣಗಳ ರಕ್ಷಣೆ.

ಮಂಗಳೂರು : ನಗರದ ಜೆಪ್ಪಿನಮೊಗರು ಸಮೀಪ ಶನಿವಾರ ಮುಂಜಾನೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸುಮಾರು 27 ಕೋಣಗಳನ್ನು ಕಂಕನಾಡಿ ನಗರ ಪೊಲೀಸ್ ಠಾಣೆಯ ಪೊಲೀಸರು ಹಾಗೂ ಬಜರಂಗದಳ ಕಾರ್ಯಕರ್ತರು ಜಂಟಿ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಜೆಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿ ಬಳಿ ಐಷರ್ (Eicher) ವಾಹನವನ್ನು ತಡೆದು ತಪಾಸಣೆ ನಡೆಸಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ವಾಹನದಲ್ಲಿದ್ದ ಕೋಣಗಳನ್ನು ಹಾವೇರಿಯಿಂದ ಕೇರಳಕ್ಕೆ ಕಟಾವಿಗಾಗಿ ಸಾಗಿಸಲಾಗುತ್ತಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಯಾವುದೇ ಸೂಕ್ತ ಪರವಾನಗಿ ಇಲ್ಲದೆ ಹಾಗೂ ಅಮಾನವೀಯ ರೀತಿಯಲ್ಲಿ ಜಾನುವಾರುಗಳನ್ನು ವಾಹನದಲ್ಲಿ ತುಂಬಿಸಲಾಗಿತ್ತು ಎನ್ನಲಾಗಿದೆ. ರಕ್ಷಿಸಲಾದ ಜಾನುವಾರುಗಳನ್ನು ಸ್ಥಳೀಯ ಗೋಶಾಲೆಗೆ ರವಾನಿಸಲು ಕ್ರಮ ಕೈಗೊಳ್ಳಲಾಗಿದೆ.

ಈ ಸಂಬಂಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಾಹನವನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular