Saturday, July 18, 2026
Homeಜಿಲ್ಲೆಮಂಗಳೂರು : ಆಂಬ್ಯುಲೆನ್ಸ್‌ನಲ್ಲೇ ಮಹಿಳೆಗೆ ಹೆರಿಗೆ ಮಾಡಿಸಿದ ಸರಕಾರಿ ಆಸ್ಪತ್ರೆಯ ಸಿಬ್ಬಂದಿ,ತುರ್ತು ಸೇವೆಗೆ ಸಾರ್ವಜನಿಕರಿಂದ ಪ್ರಶಂಸೆ.

ಮಂಗಳೂರು : ಆಂಬ್ಯುಲೆನ್ಸ್‌ನಲ್ಲೇ ಮಹಿಳೆಗೆ ಹೆರಿಗೆ ಮಾಡಿಸಿದ ಸರಕಾರಿ ಆಸ್ಪತ್ರೆಯ ಸಿಬ್ಬಂದಿ,ತುರ್ತು ಸೇವೆಗೆ ಸಾರ್ವಜನಿಕರಿಂದ ಪ್ರಶಂಸೆ.

ಮಂಗಳೂರು : ಆಂಬ್ಯುಲೆನ್ಸ್ ನಲ್ಲಿ ತಾಯಿ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಮಂಗಳೂರಿಗೆ ಹೆರಿಗೆಗಾಗಿ ಸಾಗುತ್ತಿದ್ದ ವೇಳೆ ಆಂಬ್ಯುಲೆನ್ಸ್‌ನಲ್ಲೇ ಮಹಿಳೆಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಸಿಸ್ಟರ್ ಗಳು ಹೆರಿಗೆ ಮಾಡಿಸಿದ್ದಾರೆ.

ತಿಂಗಳು ತುಂಬಿದ ಹಿನ್ನೆಲೆ ಹೆರಿಗೆಗಾಗಿ ಕುಟುಂಬಸ್ಥರು ಇಂದು ಬೆಳಗ್ಗೆ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದರು,ಹೆಚ್ಚಿನ ಚಿಕಿತೆಗಾಗಿ ಮಂಗಳೂರಿಗೆ ದಾಖಲಿಸುವಂತೆ ವೈದ್ಯರು ಸಲಹೆ ನೀಡಿದ್ದರು.ಅದರಂತೆ ಆಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಬಂಟ್ವಾಳದ ಫರಂಗಿಪೇಟೆ ಸಮೀಪ ಹೆರಿಗೆ ನೋವು ತೀವ್ರಗೊಂಡ ಹಿನ್ನೆಲೆ ಆಸ್ಪತ್ರೆಯ ಸಿಬ್ಬಂದಿಗಳು ತುರ್ತು ಕ್ರಮಕೈಗೊಂಡಿದ್ದಾರೆ. ಸಿಸ್ಟರ್ ಕುಮುದ ಮತ್ತು ಸಿಸ್ಟರ್ ಸೌಮ್ಯಾ ಎಸ್ ಅವರಿಂದ ಮಹಿಳೆಗೆ ಆಂಬ್ಯುಲೆನ್ಸ್‌ನಲ್ಲೇ ಸುರಕ್ಷಿತ ಹೆರಿಗೆ ಮಾಡಿಸಿದ್ದಾರೆ.ಬೆಳ್ತಂಗಡಿ ನಗರದ ಸುದೆಮುಗೇರು ನಿವಾಸಿ ಲೀಲಾವತಿ ಗಂಡು ಮಗುವಿಗೆ ಜನನ ನೀಡಿದ್ದಾರೆ.

ಬಳಿಕ ಚಾಲಕ ದಿನೇಶ್ ಗೌಡ ಸಮಯಪ್ರಜ್ಞೆಯಿಂದ ಹಾಗೂ ವೈದ್ಯರ ಸಲಹೆಯಂತೆ ಲೇಡಿ ಗೋಶನ್ ಆಸ್ಪತ್ರೆಗೆ ತುರ್ತು ರವಾನೆನಿಸಿದ್ದು ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ.ವೈದ್ಯಕೀಯ ಸಿಬ್ಬಂದಿಯ ಸೇವೆಗೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular