Thursday, March 12, 2026
Flats for sale
Homeಜಿಲ್ಲೆಮಂಗಳೂರು : ಆಟೋ ರಿಕ್ಷಾ ಚಾಲಕರ ಕಲ್ಯಾಣ ಮಂಡಳಿ ರಚಿಸಿ, 1000 ಕೋಟಿ ಹಣ ಮೀಸಲಿಡಬೇಕು...

ಮಂಗಳೂರು : ಆಟೋ ರಿಕ್ಷಾ ಚಾಲಕರ ಕಲ್ಯಾಣ ಮಂಡಳಿ ರಚಿಸಿ, 1000 ಕೋಟಿ ಹಣ ಮೀಸಲಿಡಬೇಕು – ಸಂತೋಷ್ ಕುಮಾರ್.

ಮಂಗಳೂರು : ಪ್ರತಿಯೊಬ್ಬರ ಬದುಕಿನಲ್ಲಿ ಅಪದ್ಭಾಂಧವರಾಗಿ ಬರುವ ಆಟೋರಿಕ್ಷಾ ಚಾಲಕರು ತಮ್ಮ ಜೀವನದ ಬಹುಪಾಲು ಸಮಯವನ್ನು ಜನರ ಸೇವೆಗಾಗಿ ಮೀಸಲಿಟ್ಟು, ಅಂತಿಮವಾಗಿ ಹಿಂತಿರುಗಿ ನೋಡಿದಾಗ ಅವರ ಶ್ರಮಕ್ಕೆ ಯಾವುದೇ ಪ್ರತಿಫಲವಿಲ್ಲವಾಗಿದೆ.ವರ್ಷಕ್ಕೆ ಸುಮಾರು 3000 ಕೋಟಿಯಷ್ಟು ಹಣ ಸರಕಾರದ ಬೊಕ್ಕಸಕ್ಕೆ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಆಟೋರಿಕ್ಷಾ ಚಾಲಕರು ತೆರಿಗೆ ಕಟ್ಟುತಿದ್ದರೂ ವಾಪಾಸ್ ಅವರಿಗೆ ಯಾವುದೇ ಸವಲತ್ತುಗಳಿಲ್ಲ.ಇಂತಹ ಸಂದರ್ಭದಲ್ಲಿ ರಿಕ್ಷಾ ಚಾಲಕರ ಉತ್ತಮ ಬದುಕಿಗಾಗಿ ಕಲ್ಯಾಣ ಮಂಡಳಿ ರಚನೆ ಮಾಡಬೇಕು ಮಾತ್ರವಲ್ಲ ಕನಿಷ್ಟ 1000 ಕೋಟಿ ಹಣವನ್ನು ಮೀಸಲಿಡಬೇಕೆಂದು ಫೆಡರೇಶನ್ ಆಫ್ ಕರ್ನಾಟಕ ಆಟೋರಿಕ್ಷಾ ಡ್ರೈವರ್ಸ್ ಯೂನಿಯನ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ರವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಆಟೋ ರಿಕ್ಷಾ ಚಾಲಕರ ದ. ಕ.ಜಿಲ್ಲಾ ಸಮಾವೇಶವನ್ನು ಉದ್ಘಾಟಿಸುತ್ತಾ ಅವರು ಈ ಮಾತುಗಳನ್ನು ಹೇಳಿದರು,ಮುಖ್ಯ ಅತಿಥಿಗಳಾಗಿ ಭಾಗವಹಿಸಿದ CITU ಜಿಲ್ಲಾ ಉಪಾಧ್ಯಕ್ಷರಾದ ಬಿ ಎಂ ಭಟ್ ರವರು ಮಾತನಾಡುತ್ತಾ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಿತ್ಯ ನಿರಂತರವಾಗಿ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಾ ಸಾರಿಗೆ ರಂಗದ ಕಾರ್ಮಿಕರು ತೀವ್ರ ಸಂಕಷ್ಟಗೊಳಗಾಗಿದ್ದಾರೆ. ಅದರಲ್ಲೂ ಆಟೋರಿಕ್ಷಾ ಚಾಲಕರ ಬವಣೆಯಂತೂ ಹೇಳತೀರದಾಗಿದೆ ಎಂದು ಹೇಳಿದರು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ FKARDU ಜಿಲ್ಲಾಧ್ಯಕ್ಷರಾದ ಸುನಿಲ್ ಕುಮಾರ್ ಬಜಾಲ್ ರವರು ಆಟೋ ರಿಕ್ಷಾ ಚಾಲಕರ ಬದುಕಿನ ಬವಣೆಗಳ ಬಗ್ಗೆ ಬೆಳಕು ಚೆಲ್ಲುತ್ತಾ, ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಬೇಳೆ ಬೇಯಿಸಿಕೊಳ್ಳಲು ಆಟೋರಿಕ್ಷಾ ಚಾಲಕರನ್ನು ತಮ್ಮ ದಾಳವನ್ನಾಗಿಸುತ್ತಾ ಅವರ ಬದುಕಿನ ಪ್ರಶ್ನೆಗಳನ್ನು ಕೇಳುವವರೇ ಇಲ್ಲವಾಗಿದೆ. ಮುಂಬರುವ ದಿನಗಳಲ್ಲಿ ರಿಕ್ಷಾ ಚಾಲಕರ ಬಲಿಷ್ಠ ಚಳುವಳಿಯನ್ನು ಕಟ್ಟಲು ಎಲ್ಲರೂ ಒಂದಾಗಬೇಕಿದೆ ಎಂದು ಹೇಳಿದರು.

ವೇದಿಕೆಯಲ್ಲಿ DYFI ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್,ಹಿರಿಯ ರಿಕ್ಷಾ ಚಾಲಕ ಮುಖಂಡರಾದ ಕೃಷ್ಣಪ್ಪ ಗೌಡ, ಯುವ ಕಾರ್ಮಿಕ ನಾಯಕರಾದ ಬಿ ಕೆ ಇಮ್ತಿಯಾಜ್ ರವರು ಉಪಸ್ಥಿತರಿದ್ದರು.

ಬಳಿಕ ಸಮಾವೇಶವು ನೂತನ ಸಮಿತಿಯನ್ನು ಆಯ್ಕೆಗೊಳಿಸಿತು.ಫೆಡರೇಶನ್ ನ ಜಿಲ್ಲಾ ಗೌರವಾಧ್ಯಕ್ಷರಾಗಿ ಬಿ ಎಂ ಭಟ್,ಅಧ್ಯಕ್ಷರಾಗಿ ಸುನಿಲ್ ಕುಮಾರ್ ಬಜಾಲ್,ಪ್ರಧಾನ ಕಾರ್ಯದರ್ಶಿಯಾಗಿ ಮಹಮ್ಮದ್ ಅನ್ಸಾರ್, ಖಜಾಂಚಿಯಾಗಿ ವಿಶ್ವನಾಥ್ ಶೆಟ್ಟಿ ಸೇರಿದಂತೆ 16 ಪದಾಧಿಕಾರಿಗಳು ಹಾಗೂ 17 ಕಾರ್ಯಕಾರಿ ಸಮಿತಿ ಸದಸ್ಯರನ್ನು ಸರ್ವಾನುಮತದಿಂದ ಆಯ್ಕೆಗೊಳಿಸಲಾಯಿತು.

RELATED ARTICLES

LEAVE A REPLY

Please enter your comment!
Please enter your name here

Most Popular