Sunday, March 15, 2026
Flats for sale
Homeಜಿಲ್ಲೆಮಂಗಳೂರು : ಆಪಲ್ ಐ ಫೋನ್ ಸರ್ವಿಸ್ ಸೆಂಟರ್ ವಿರುದ್ಧ ಮೊಬೈಲ್ ರಿಟೇಲರ್ಸ್ ಪ್ರತಿಭಟನೆ.

ಮಂಗಳೂರು : ಆಪಲ್ ಐ ಫೋನ್ ಸರ್ವಿಸ್ ಸೆಂಟರ್ ವಿರುದ್ಧ ಮೊಬೈಲ್ ರಿಟೇಲರ್ಸ್ ಪ್ರತಿಭಟನೆ.

ಮಂಗಳೂರು : “ನಮ್ಮಲ್ಲಿ ಹಾಗು ಬೇರೆ ಕಡೆ ಮೊಬೈಲ್ ಖರೀದಿಸಿದ ಹಲವು ಗ್ರಾಹಕರು ಆಪಲ್ IOS UPDATE ನಂತರ ಮೊಬೈಲ್ ಸ್ಕ್ರೀನ್ ನಲ್ಲಿ ಲೈನ್ ಅಥವಾ ಸ್ಕ್ರೀನ್ ಬ್ಲ್ಯಾಂಕ್ ಆಗುವಂತಹ ಸಮಸ್ಯೆ ಎದುರಾಗಿದೆ. ಈ ಸಮಸ್ಯೆಯಿಂದ ನೊಂದ ಗ್ರಾಹಕರು ಆಪಲ್ ನ ಸರ್ವಿಸ್ ಸೆಂಟರ್ ಮ್ಯಾಪಲ್ ಅನ್ನು ಭೇಟಿ ಮಾಡಿ ಸಮಸ್ಯೆ ಬಗೆಹರಿಸಲು ಕೋರಿದಾಗ ಅವರ ಉಡಾಫೆ ಉತ್ತರ ಗ್ರಾಹಕರಿಗೆ ಆಘಾತ ಉಂಟು ಮಾಡಿದೆ. ಗ್ರಾಹಕರ ಹಿತದೃಷ್ಟಿಯಿಂದ, ಆಪಲ್ ನ ಮ್ಯಾಪಲ್ ಸರ್ವಿಸ್ ಸೆಂಟರ್‌ ನ ಕಳಪೆ ಸೇವೆಗಳ ವಿರುದ್ಧ ಪ್ರತಿಭಟನೆ ನಡೆಸುವ ಅನಿವಾರ್ಯತೆ ಉಂಟಾಗಿದೆ. ಹೀಗಾಗಿ ಜ್ಯೋತಿ ಸರ್ಕಲ್ ನಿಂದ ಬೆಳಗ್ಗೆ 11 ಗಂಟೆಗೆ ಹೊರಟು ಆಪಲ್ ನ ಸರ್ವಿಸ್ ಸೆಂಟರ್ ಮ್ಯಾಪಲ್ ನ ಎದುರುಗಡೆಯಿಂದ ಕ್ಲಾಕ್ ಟವರ್ ವರಗೆ ನಮ್ಮ ಪ್ರತಿಭಟನಾ ಮೆರವಣಿಗೆ ಮೂಲಕ ಬಂದು ಕ್ಲಾಕ್ ಟವರ್ ನಲ್ಲಿ ನಾವು ನಮ್ಮ ಬೇಡಿಕೆಗಳನ್ನು ಆಪಲ್ ಕಂಪೆನಿಯ ಮುಂದೆ ಇಡಲಿದ್ದೇವೆ“ ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್ ಸಂಘಟನೆಯ ರಾಜ್ಯ ಸುದ್ದಿ ಮತ್ತು ಮಾಧ್ಯಮ ನಿರ್ವಾಹಕ ವಿವೇಕ್ ಜಿ ಸುವರ್ಣ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

”ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಸ್ಥಳೀಯ ರೀಟೇಲರ್ ಗಳು ತಮ್ಮ ಗ್ರಾಹಕರಿಗೋಸ್ಕರ ಬೀದಿಗೆ ಇಳಿದು
ಪ್ರತಿಭಟಿಸುತ್ತಿದ್ದಾರೆ. ಇದರಲ್ಲಿ ಹಲವು ನೊಂದ ಗ್ರಾಹಕರು ಪಾಲ್ಗೊಳ್ಳುತ್ತಿದ್ದಾರೆ ಹಾಗೂ ಮತ್ತು ಹಲವು ಸಮಸ್ಯೆಗೊಳಗಾದ ಗ್ರಾಹಕರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗಿಯಾಗಿ ಬೆಂಬಲ ನೀಡಬೇಕಾಗಿ ಕೇಳಿ ಕೊಳ್ಳುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಈ ರೀತಿಯ ಸಮಸ್ಯೆಗಳು ಬಂದರೆ ಫ್ಲಿಪ್ಕಾರ್ಟ್ ಅಥವಾ ಅಮೆಜಾನ್ ನಂತಹ ವಿದೇಶೀ ಕಂಪನಿಗಳು ಗ್ರಾಹಕರ ಹಿತರಕ್ಷಣೆಗೆ ನಿಲ್ಲುವುದಿಲ್ಲ. ಕೇವಲ ಸ್ಥಳೀಯ ಅಂಗಡಿಗಳು ಮಾತ್ರ ಗ್ರಾಹಕರ ಹಿತರಕ್ಷಣೆಗೆ ಹಾಗು ಅವರ ಅನುಕೂಲಕ್ಕೆ ನಿಲ್ಲುತ್ತೇವೆ ಮತ್ತು ಹಾಗೆ ಮುಂದಿನ ಹಬ್ಬದ ಖರೀದಿಯನ್ನು ಗ್ರಾಹಕರು ಆದಷ್ಟು ಸ್ಥಳೀಯ ಅಂಗಡಿಗಳಲ್ಲಿ ವ್ಯಾಪಾರ ನಡೆಸಿ ಸ್ಥಳೀಯರನ್ನು ಬೆಂಬಲಿಸ ಬೇಕಾಗಿ ವಿನಂತಿಸಿ ಕೊಳ್ಳುತ್ತಿದ್ದೇವೆ“ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಸಂಘಟನೆಯ ಚೇರ್ ಮೆನ್ ಗುರುದತ್ ಕಾಮತ್, ಅಧ್ಯಕ್ಷ ರಾಜೇಶ್ ಮಾಬಿಯಾನ್, ಕಾರ್ಯದರ್ಶಿ ಇಮ್ರಾನ್, ಸ್ಥಾಪಕ ಅಧ್ಯಕ್ಷ ಸಲೀಮ್, ಮಾಜಿ ಅಧ್ಯಕ್ಷ ಶೈಲೇಂದ್ರ ಸರಳಾಯ, ಉಪಾಧ್ಯಕ್ಷ ಅಝರ್ ಮೊಹಮದ್ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular