Thursday, December 12, 2024
Flats for sale
Homeಜಿಲ್ಲೆಮಂಗಳೂರು : ಎಂಆರ್ ಪಿಎಲ್ ಹಸಿರು ವಲಯ ಭೂಸ್ವಾಧೀನ ಪ್ರಕ್ರಿಯೆ: ಪರಿಹಾರ ಪ್ಯಾಕೇಜ್ ಘೋಷಣೆಗೆ ಜಿಲ್ಲಾ...

ಮಂಗಳೂರು : ಎಂಆರ್ ಪಿಎಲ್ ಹಸಿರು ವಲಯ ಭೂಸ್ವಾಧೀನ ಪ್ರಕ್ರಿಯೆ: ಪರಿಹಾರ ಪ್ಯಾಕೇಜ್ ಘೋಷಣೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ನಿರ್ದೇಶನ.

ಮಂಗಳೂರು : ದ.ಕ. ಜಿಲ್ಲೆಯ ಎಂಆರ್ ಪಿಎಲ್ ಮೂರನೇ ಹಂತದ ಭಾಗವಾಗಿ ಹಸಿರು ವಲಯ ನಿರ್ಮಾಣಕ್ಕಾಗಿ ಜೋಕಟ್ಟೆ ಗ್ರಾಮದಲ್ಲಿ 27 ಎಕರೆ ಜಮೀನು ಸ್ವಾಧೀನ ಪಡಿಸಿಕೊಂಡಿದ್ದರಿಂದ ನಿರಾಶ್ರಿತರಾದವರಿಗೆ ಪರಿಹಾರ ಪ್ಯಾಕೇಜ್ ಅನ್ನು ಕೂಡಲೇ ಘೋಷಣೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದರು.

ದ.ಕ.ದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಸಚಿವರು ಮಾತನಾಡಿದ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಂಆರ್‌ಪಿಎಲ್‌ ಹಸಿರು ವಲಯಕ್ಕೆ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಸ್ಥಳೀಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು.

ಮೂರನೇ ಹಂತದ ಹಸಿರು ವಲಯಕ್ಕೆ ಭೂಸ್ವಾಧೀನಕ್ಕೆ ಸಂಬಂಧಿಸಿದ ಸಮೀಕ್ಷೆ ನಡೆಸುವ ಜವಾಬ್ದಾರಿಯನ್ನು ಈಗಾಗಲೇ ಕೆಪಿಟಿ ಪಾಲಿಟೆಕ್ನಿಕ್ ಸಂಸ್ಥೆಗೆ ವಹಿಸಲಾಗಿದೆ. ಸಮೀಕ್ಷಾ ವರದಿಗೆ ಮೂರು ತಿಂಗಳು ಬೇಕಾಗುವ ನಿರೀಕ್ಷೆ ಇದ್ದು, ಅದಕ್ಕೂ ಮುನ್ನ ನಿರಾಶ್ರಿತರಿಗೆ ಪರಿಹಾರ ಪ್ಯಾಕೇಜ್ ಘೋಷಿಸಬೇಕು ಎಂದು ಸಚಿವರು ಸೂಚನೆ ನೀಡಿದರು.

ಹಸಿರು ವಲಯ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ಮತ್ತು ಪ್ರಾಯೋಗಿಕವಾಗಿ ನಡೆಸಬೇಕು, ಪ್ರದೇಶದ ಮನೆ ಮತ್ತು ಜಮೀನುಗಳ ಬಗ್ಗೆ ವಿವರವಾದ ವರದಿಯನ್ನು ನೀಡಬೇಕು ಎಂದು ಸಚಿವರು ಒತ್ತಿ ಹೇಳಿದರು. ಶೀಘ್ರದಲ್ಲೇ ಭೂಮಿ ಸ್ವಾಧೀನಪಡಿಸಿಕೊಳ್ಳುವ ಸ್ಥಳಕ್ಕೆ ಭೇಟಿ ನೀಡುವುದಾಗಿ ತಿಳಿಸಿದರು.

ಹಸಿರು ವಲಯಕ್ಕೆ ಭೂಸ್ವಾಧೀನಕ್ಕೆ ಸರ್ವೇ ವರದಿ ಹಾಗೂ ಗ್ರಾಮಸ್ಥರ ಒಪ್ಪಿಗೆ ಅಗತ್ಯ ಎಂದು ಎಂಆರ್‌ಪಿಎಲ್‌ ಅಧಿಕಾರಿಗಳು ತಿಳಿಸಿದ್ದಾರೆ. ಶೀಘ್ರ ನಿರ್ಧಾರ ಕೈಗೊಳ್ಳಲು ಪರಿಹಾರ ಪ್ಯಾಕೇಜ್ ಅನ್ನು ಮಂಡಳಿಯ ಸಭೆಯಲ್ಲಿ ಮಂಡಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಕೈಗಾರಿಕಾ ಜಂಟಿ ನಿರ್ದೇಶಕ ಗೋಕುಲದಾಸ್ ನಾಯಕ್, ಕೆಐಎಡಿಬಿ ವಿಶೇಷ ಭೂಸ್ವಾಧೀನ ಅಧಿಕಾರಿ ರಾಜು, ಸಾಮಾಜಿಕ ಕಾರ್ಯಕರ್ತ ಮುನೀರ್ ಕಾಟಿಪಳ್ಳ, ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ಬಶೀರ್, ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular