Saturday, September 19, 2026
Homeಜಿಲ್ಲೆಮಂಗಳೂರು : ಕರಾವಳಿಗೆ ಹೊಸ ರೂಪ ನೀಡುವ ಉದ್ದೇಶದಿಂದ ಸಂಪುಟ ಸಭೆ –ಸಿ.ಎಂ ಡಿ.ಕೆ ಶಿವಕುಮಾರ್.

ಮಂಗಳೂರು : ಕರಾವಳಿಗೆ ಹೊಸ ರೂಪ ನೀಡುವ ಉದ್ದೇಶದಿಂದ ಸಂಪುಟ ಸಭೆ –ಸಿ.ಎಂ ಡಿ.ಕೆ ಶಿವಕುಮಾರ್.

ಮಂಗಳೂರು : ಕರಾವಳಿ ಭಾಗದ ಅಭಿವೃದ್ಧಿಗೆ ಹೊಸ ರೂಪ ನೀಡುವ ಉದ್ದೇಶದಿಂದ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, “ಕರಾವಳಿ ಮತ್ತು ಮಲೆನಾಡು ವಿದ್ಯಾವಂತರು ಹಾಗೂ ಬುದ್ಧಿವಂತರು ಇರುವ ಜಿಲ್ಲೆಗಳು. ಈ ಭಾಗಕ್ಕೆ ಶಕ್ತಿ ತುಂಬಬೇಕು ಎಂಬ ಉದ್ದೇಶದಿಂದ ಸಂಪುಟ ಸಭೆ ನಡೆಸುತ್ತಿದ್ದೇವೆ” ಎಂದರು.
ಕರಾವಳಿ ಭಾಗದ ಶಾಸಕರು ಹಾಗೂ ಸಂಸದರು ತಮ್ಮನ್ನು ಭೇಟಿಯಾಗಿ ಸ್ಥಳೀಯ ಸಮಸ್ಯೆಗಳು ಮತ್ತು ಬೇಡಿಕೆಗಳನ್ನು ತಿಳಿಸಿದ್ದಾರೆ. “ಅವರ ಬೇಡಿಕೆಗಳನ್ನು ಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ. ಆ ಬೇಡಿಕೆಗಳು ನನ್ನ ಮನಸ್ಸಿನಲ್ಲಿವೆ. ಇಲ್ಲಿನ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಅವರು ಹೇಳಿದ್ದಾರೆ. ಸಂಪುಟ ಸಭೆಯಲ್ಲಿ ಸಾಧ್ಯವಾದಷ್ಟು ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸುತ್ತೇವೆ” ಎಂದು ತಿಳಿಸಿದರು.

ಕಸ್ತೂರಿ ರಂಗನ್ ವರದಿ ಕುರಿತು ಚರ್ಚೆ : ಕಸ್ತೂರಿ ರಂಗನ್ ವರದಿ ಹಾಗೂ ಬರ ಪರಿಸ್ಥಿತಿ ಕುರಿತು ವಿಶೇಷ ಅಧಿವೇಶನ ಕರೆಯಲಾಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು.“ಕಸ್ತೂರಿ ರಂಗನ್ ವರದಿ ಬಗ್ಗೆ ಆಯಾ ಶಾಸಕರು ತಮ್ಮ ಅಭಿಪ್ರಾಯ ಮಂಡಿಸಲು ಅವಕಾಶ ನೀಡಿದ್ದೇವೆ. ಎರಡು ದಿನಗಳ ಅಧಿವೇಶನದಲ್ಲಿ ಬರ ಹಾಗೂ ಕಸ್ತೂರಿ ರಂಗನ್ ವರದಿ ಕುರಿತು ಚರ್ಚೆ ನಡೆಯಲಿದೆ. ಅರಣ್ಯ ಸಚಿವರೂ ತಮ್ಮ ವರದಿಯನ್ನು ನೀಡಲಿದ್ದಾರೆ” ಎಂದರು.

ಬಾಧಿತ ಜನರ ಅಭಿಪ್ರಾಯ ಸಂಗ್ರಹ
ಕಸ್ತೂರಿ ರಂಗನ್ ವರದಿಯಿಂದ ಬಾಧಿತರಾಗಿರುವ ಜನರೊಂದಿಗೆ ನೇರವಾಗಿ ಮಾತನಾಡುವುದಾಗಿ ಮುಖ್ಯಮಂತ್ರಿ ತಿಳಿಸಿದರು.
“ಕಸ್ತೂರಿ ರಂಗನ್ ವರದಿ ಬಾಧಿತ ಜನರ ಜೊತೆ ಮಾತನಾಡುತ್ತೇನೆ. ನೇರವಾಗಿ ಅವರ ಬಳಿಗೆ ತೆರಳಿ ಅಭಿಪ್ರಾಯ ಸಂಗ್ರಹಿಸುತ್ತೇನೆ” ಎಂದು ಡಿಕೆ ಶಿವಕುಮಾರ್ ಹೇಳಿದರು.
ಮಂಗಳೂರಿನಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ

RELATED ARTICLES

LEAVE A REPLY

Please enter your comment!
Please enter your name here

Most Popular