ಮಂಗಳೂರು ; ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಐವರು ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಮಂಗಳೂರು ಉತ್ತರ ಕ್ಷೇತ್ರದಿಂದ ಇನಾಯತ್ ಅಲಿ ಮುಲ್ಕಿ ಅವರಿಗೆ ಟಿಕೆಟ್ ನೀಡಲಾಗಿದೆ.
ಕಾಂಗ್ರೆಸ್ ಬಿಡುಗಡೆ ಮಾಡಿದ ಹಿಂದಿನ ಪಟ್ಟಿಗಳಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದಿಂದ ಮಾಜಿ ಶಾಸಕ ಜೆಆರ್ ಲೋಬೋ ಅವರಿಗೆ ಟಿಕೆಟ್ ನೀಡಲಾಗಿತ್ತು. ಅಶೋಕ್ ಕುಮಾರ್ ರೈ ಅವರು ಪುತ್ತೂರು ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಕಾರ್ಕಳ ಕ್ಷೇತ್ರದಿಂದ ಮುನಿಯಾಲ್ ಉದಯಕುಮಾರ್ ಶೆಟ್ಟಿ ಅವರಿಗೆ ಟಿಕೆಟ್ ನೀಡಲಾಗಿದೆ.
ಕರಾವಳಿ ಭಾಗದಲ್ಲಿ ಮಂಗಳೂರಿನಿಂದ ಯು ಟಿ ಖಾದರ್, ಮೂಡುಬಿದಿರೆಯಿಂದ ಮಿಥುನ್ ರೈ, ಬೆಳ್ತಂಗಡಿಯಿಂದ ರಕ್ಷಿತ್ ಶಿವರಾಮ್, ಬಂಟ್ವಾಳದಿಂದ ರಮಾನಾಥ್ ರೈ, ಸುಳ್ಯದಿಂದ ಕೃಷ್ಣಪ್ಪ ಜಿ, ಬೈಂದೂರಿನಿಂದ ಗೋಪಾಲ್ ಪೂಜಾರಿ, ಕಾಪು ವಿನಯ್ ಕುಮಾರ್ ಸೊರಕೆ, ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ದಿನೇಶ್ ಹೆಗ್ಡೆ ಮೊಳಹಳ್ಳಿಗೆ ಟಿಕೆಟ್ ನೀಡಲಾಗಿದೆ. . ಪ್ರಸಾದ್ ರಾಜ್ ಕಾಂಚನ್ ಅವರಿಗೆ ಉಡುಪಿ ಕ್ಷೇತ್ರದಿಂದ ಸ್ಪರ್ಧಿಸಲು ಚುನಾವಣಾ ಟಿಕೆಟ್ ನೀಡಲಾಗಿತ್ತು.