Friday, March 13, 2026
Flats for sale
Homeಜಿಲ್ಲೆಮಂಗಳೂರು : ಕಾಸರಗೋಡು-ತಿರುವನಂತಪುರಂ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಮಂಗಳೂರಿನವರೆಗೆ ವಿಸ್ತರಣೆ.

ಮಂಗಳೂರು : ಕಾಸರಗೋಡು-ತಿರುವನಂತಪುರಂ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಮಂಗಳೂರಿನವರೆಗೆ ವಿಸ್ತರಣೆ.

ಮಂಗಳೂರು : ಕಾಸರಗೋಡು-ತಿರುವನಂತಪುರಂ ಹೊರಡಲಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಮಂಗಳೂರಿನವರೆಗೆ ವಿಸ್ತರಿಸುವ ಪ್ರಸ್ತಾವನೆಗೆ ರೈಲ್ವೆ ಸಚಿವಾಲಯ ಬುಧವಾರ ಅನುಮೋದನೆ ನೀಡಿದೆ.

ಮಂಗಳೂರು-ತಿರುವನಂತಪುರಂ ವಂದೇ ಭಾರತ್ ಎಕ್ಸ್‌ಪ್ರೆಸ್(ರೈಲು ಸಂಖ್ಯೆ. 20631) ಮಂಗಳೂರಿನಿಂದ ಬೆಳಗ್ಗೆ 6.15 ಕ್ಕೆ ಹೊರಟು, ಮಧ್ಯಾಹ್ನ 3.05ಕ್ಕೆ ತಿರುವನಂತಪುರಂ ತಲುಪಲಿದೆ. ಬುಧವಾರ ಹೊರತುಪಡಿಸಿ ವಾರದ ಆರು ದಿನ ಈ ವಂದೇ ಭಾರತ್ ರೈಲು ಸಂಚರಿಸಲಿದೆ ಎಂದು ರೈಲ್ವೆ ಮಂಡಳಿಯ ಜಂಟಿ ನಿರ್ದೇಶಕ(ಕೋಚಿಂಗ್) ವಿವೇಕ್ ಕುಮಾರ್ ಸಿನ್ಹಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಿರುವನಂತಪುರಂ-ಮಂಗಳೂರು ಎಕ್ಸ್‌ಪ್ರೆಸ್(ರೈಲು ಸಂಖ್ಯೆ 20632) ರೈಲು ತಿರುವನಂತಪುರದಿಂದ ಸಂಜೆ 4.05 ಕ್ಕೆ ಹೊರಟು ಮಧ್ಯ ರಾತ್ರಿ 12.40 ಕ್ಕೆ ಮಂಗಳೂರು ತಲುಪಲಿದೆ. ಈ ಮಾರ್ಗದಲ್ಲಿ ರೈಲು ಕಾಸರಗೋಡು, ಕಣ್ಣೂರು, ಕೋಝಿಕ್ಕೋಡ್ ಮೇನ್, ತಿರೂರ್, ಶೋರನೂರು, ತ್ರಿಶೂರ್, ಎರ್ನಾಕುಲಂ, ಆಲಪ್ಪುಳ ಮತ್ತು ಕೊಲ್ಲಂನಲ್ಲಿ ನಿಲ್ಲುತ್ತದೆ ಎಂದು ತಿಳಿಸಿದ್ದಾರೆ..

RELATED ARTICLES

LEAVE A REPLY

Please enter your comment!
Please enter your name here

Most Popular