Thursday, May 28, 2026
Flats for sale
Homeಜಿಲ್ಲೆಮಂಗಳೂರು : ಪೊಲೀಸ್ ಸಿಬ್ಬಂದಿಗೆ ಕಾರು ಡಿಕ್ಕಿ ಹೊಡೆದ ಕಲಾವಿದ : ಕರ್ತವ್ಯದಲ್ಲಿದ್ದ ಸಿಬ್ಬಂದಿಗೆ...

ಮಂಗಳೂರು : ಪೊಲೀಸ್ ಸಿಬ್ಬಂದಿಗೆ ಕಾರು ಡಿಕ್ಕಿ ಹೊಡೆದ ಕಲಾವಿದ : ಕರ್ತವ್ಯದಲ್ಲಿದ್ದ ಸಿಬ್ಬಂದಿಗೆ ಗಂಭೀರ ಗಾಯ.

ಮಂಗಳೂರು : ನಗರದ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ವೇರ್ ಹೌಸ್ ಸಮೀಪ ಕುಡಿದು ಕಾರು ಚಲಾಯಿಸಿದ್ದ ಆರೋಪಿಯೊಬ್ಬನು ಕರ್ತವ್ಯದಲ್ಲಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಮಂಗಳೂರು ನಗರ ಸಂಚಾರ ಪಶ್ಚಿಮ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ವಿಠ್ಠಲ್ ದಾಸ್ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಕುಮಾರ ಅವರು ರಾತ್ರಿ ಕರ್ತವ್ಯದಲ್ಲಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಬಲ್ಲಾಲ್ ಬಾಗ್ ಜಂಕ್ಷನ್ ಬಳಿ ಅಪಘಾತಕ್ಕೊಳಗಾದ ವಾಹನ ಪ್ರಕರಣವನ್ನು ಪರಿಶೀಲಿಸಿ ಠಾಣೆಗೆ ತೆರಳುತ್ತಿದ್ದ ಸಂದರ್ಭದಲ್ಲಿ, KA-19 MP-9623 ಸಂಖ್ಯೆಯ ಕಾರನ್ನು ಚಲಾಯಿಸುತ್ತಿದ್ದ ಚಾಲಕ ವೇಗವಾಗಿ ಬಂದು ರಸ್ತೆ ಬದಿಯಲ್ಲಿ ನಿಂತಿದ್ದ ಪೊಲೀಸ್ ಸಿಬ್ಬಂದಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಹೆಡ್ ಕಾನ್ಸ್ಟೇಬಲ್ ವಿಠ್ಠಲ್ ದಾಸ್ ಅವರು ನೆಲಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಟೋ ಮೂಲಕ ಕೆಎಂಸಿ ಆಸ್ಪತ್ರೆ ಅತ್ತಾವರದಲ್ಲಿ ದಾಖಲಿಸಲಾಯಿತು. ವೈದ್ಯರ ಪ್ರಕಾರ, ವಿಠ್ಠಲ್ ದಾಸ್ ಅವರ ಸ್ಪೈನಲ್ ಕಾರ್ಡ್‌ಗೆ ತೀವ್ರ ಗಾಯವಾಗಿದ್ದು, ಸೊಂಟದಿಂದ ಕೆಳಭಾಗಕ್ಕೆ ಶಕ್ತಿ ಕುಂದಿರುವುದಾಗಿ ತಿಳಿಸಲಾಗಿದೆ.

ಪ್ರಾಥಮಿಕ ತನಿಖೆಯಲ್ಲಿ ಕಾರು ಚಾಲಕ ರಾಂಗ್ ಸೈಡ್‌ನಲ್ಲಿ ವಾಹನ ಚಲಾಯಿಸಿಕೊಂಡು ಬಂದು ಅಪಘಾತ ಎಸಗಿರುವುದು ಬೆಳಕಿಗೆ ಬಂದಿದೆ.ಈ ಸಂಬಂಧ ಮಂಗಳೂರು ನಗರ ಸಂಚಾರ ಪಶ್ಚಿಮ ಪೊಲೀಸ್ ಠಾಣೆಯಲ್ಲಿ BNS ಕಲಂ 281 ಹಾಗೂ 125(b) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular