ಮಂಗಳೂರು : ನಗರದ ಎಕ್ಕೂರು ನಡಿಗುತ್ತು ನಿವಾಸಿ ದಯಾನಂದ (47) ಅವರು ಜೂನ್ 3ರಂದು ಕೆಲಸಕ್ಕೆಂದು ಕುಲಶೇಖರಕ್ಕೆ ತೆರಳಿದ ಬಳಿಕ ನಾಪತ್ತೆಯಾಗಿದ್ದು, ಈ ಸಂಬಂಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ನೀಡಿರುವ ಮಾಹಿತಿಯಂತೆ, ದಯಾನಂದ ಅವರು ಸುಮಾರು 5.4 ಅಡಿ ಎತ್ತರ, ಎಣ್ಣೆ ಕಪ್ಪು ಮೈಬಣ್ಣ, ದಪ್ಪ ಶರೀರ ಹಾಗೂ ದುಂಡು ಮುಖ ಹೊಂದಿದ್ದಾರೆ. ಅವರು ತೊದಲು ಮಾತನಾಡುತ್ತಿದ್ದು, ಬಲಗೈಯಲ್ಲಿ ತಾಮ್ರದ ಖಡ್ಗ ಧರಿಸಿರುತ್ತಾರೆ. ಕನ್ನಡ ಮತ್ತು ತುಳು ಭಾಷೆ ಮಾತನಾಡುತ್ತಾರೆ ಎಂದು ತಿಳಿಸಲಾಗಿದೆ. ಕಾಣೆಯಾದ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.


