ಮಂಗಳೂರು : ಕೇರಳದ ಆಲಪುಳ ಜಿಲ್ಲೆಯ ಎರಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಕ್ಕಿಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದ ಆಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ತಲಪಾಡಿ, ಜಾಲ್ಸೂರು ಮತ್ತು ಸಾರಡ್ಕದಲ್ಲಿ ವಿಶೇಷ ಚೆಕ್ ಪೋಸ್ಟ್ ತೆರೆದಿದೆ . ಈ ಚೆಕ್ ಪೋಸ್ಟ್ಗಳಲ್ಲಿ ಕೋಳಿ ಉತ್ಪನ್ನಗಳನ್ನು ಕೇರಳಕ್ಕೆ ತಲುಪಿಸಿದ ನಂತರ ದಕ್ಷಿಣ ಕನ್ನಡಕ್ಕೆ ಹಿಂದಿರುಗುವ ವಾಹನಗಳನ್ನು ಸ್ಯಾನಿಸೈಟಸ್ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.
ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ.ಅರುಣ್ ಕುಮಾರ್ ಮಾತನಾಡಿ, ಅಲಪುಳದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದ್ದು ಮಂಗಳೂರಿನಿಂದ 400 ಕಿ.ಮೀ ದೂರದಲ್ಲಿದ್ದು, ವೈರಸ್ ವೇಗವಾಗಿ ಹರಡುವ ಸಾಧ್ಯತೆಯಿದ್ದು, ಪಕ್ಷಿಗಳಿಂದ ಮನುಷ್ಯರಿಗೆ ಹರಡುವ ಸಾಧ್ಯತೆಯಿರುವುದರಿಂದ ಆಡಳಿತ ಕಟ್ಟೆಚ್ಚರ ವಹಿಸಿದೆ. ಆದಾಗ್ಯೂ, ವೈರಸ್ ಮನುಷ್ಯರಿಂದ ಮನುಷ್ಯರಿಗೆ ಹರಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ .


