ಮಂಗಳೂರು : ಅರಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಕಳೆದ ಹಲವು ದಿನಗಳಿಂದ ಕರಾವಳಿ ಸಹಿತ ರಾಜ್ಯದ ಹಲವು ಕಡೆಗಳಲ್ಲಿ ಧಾರಾಕಾರ ಮಳೆ ಸುರಿಯತೊಡಗಿದ್ದು ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲೂ ಧಾರಾಕಾರ ಮಳೆ ಸುರಿಯುತ್ತಿದೆ. ಮಂಗಳೂರಿನಲ್ಲಿ ಹಲವು ದಿನದಿಂದ ಆರಂಭಗೊಂಡ ಮಳೆ ಇಂದು ನಸುಕಿನ ಜಾವದವರೆಗೂ ಮುಂದುವರಿದಿತ್ತು.



ಇಂದು ಸಂಜೆ ಸುರಿದ ಗಾಳಿ ಮಳೆಗೆ ಲೇಡಿಹಿಲ್ ಬಳಿ ಹಲವು ಮರಗಳು ಧರೆಗೆ ಉರುಳಿದ್ದು ಬಸ್ಸು ಕಾರು ಸೇರಿ ಹಲವು ವಾಹನಗಳು ಜಖಂಗೊಂಡಿದೆ.ಮೂರರಿಂದ ನಾಲ್ಕು ಮರಗಳು ಉರುಳಿ ಬಿದ್ದ ಹಿನ್ನೆಲೆ ಲೇಡಿಹಿಲ್ ಬಳಿ ಸಂಚಾರ ಅಸ್ತವ್ಯಸ್ಥಗೊಂಡಿದೆ. ಸಂಜೆ ಸುರಿದ ಭಾರೀ ಗಾಳಿ ಮಳೆಯಿಂದಾಗಿ ಹಲವು ಕಡೆಗಳಲ್ಲಿ ಹಾನಿ ಉಂಟಾಗಿರುವ ಬಗ್ಗೆಯೂ ವರದಿಯಾಗಿದೆ. ಬಳಿಕ ರಕ್ಷಣಾ ತಂಡ ಸ್ಥಳಕ್ಕೆ ಆಗಮಿಸಿದ್ದು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.


