Saturday, July 18, 2026
Homeಜಿಲ್ಲೆಮಂಗಳೂರು : ಗುರುವಾಯನಕೆರೆ–ಉಪ್ಪಿನಂಗಡಿ ಹೆದ್ದಾರಿ ಅಭಿವೃದ್ಧಿಗೆ ಸಚಿವ ಸಂಪುಟ ಅನುಮೋದನೆ.

ಮಂಗಳೂರು : ಗುರುವಾಯನಕೆರೆ–ಉಪ್ಪಿನಂಗಡಿ ಹೆದ್ದಾರಿ ಅಭಿವೃದ್ಧಿಗೆ ಸಚಿವ ಸಂಪುಟ ಅನುಮೋದನೆ.

ಮಂಗಳೂರು ; ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಸಂಪರ್ಕ ಮಾರ್ಗವಾದ ಗುರುವಾಯನಕೆರೆ–ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ರಾಜ್ಯ ಸಚಿವ ಸಂಪುಟವು ₹13 ಕೋಟಿ ವೆಚ್ಚದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ.

Vidhana Soudhaದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಗುರುವಾಯನಕೆರೆ–ಉಪ್ಪಿನಂಗಡಿ ರಸ್ತೆ ಗುಡ್ಡ, ಇಳಿಜಾರು ಹಾಗೂ ತಿರುವುಗಳಿಂದ ಕೂಡಿರುವುದರಿಂದ ಸಂಚಾರಕ್ಕೆ ಸವಾಲಿನಾಗಿದೆ. ಈ ಮಾರ್ಗವು ಬೆಂಗಳೂರು ಸೇರಿದಂತೆ ಜಿಲ್ಲಾ ಕೇಂದ್ರಗಳಿಗೆ ಸಂಪರ್ಕ ಕಲ್ಪಿಸುವುದರ ಜೊತೆಗೆ ಧರ್ಮಸ್ಥಳ, ವೇಣೂರು, ಸಹಸ್ರಲಿಂಗೇಶ್ವರ ದೇವಾಲಯ ಹಾಗೂ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಆಗಿದೆ.

ಈಗಾಗಲೇ 9.50 ಕಿ.ಮೀ. ರಸ್ತೆ ಚತುಷ್ಪಥವಾಗಿ ಅಭಿವೃದ್ಧಿಗೊಂಡಿದ್ದು, ಉಳಿದ ಭಾಗದಲ್ಲಿ ಲಭ್ಯ ಅನುದಾನಕ್ಕೆ ಅನುಗುಣವಾಗಿ 1.270 ಕಿ.ಮೀ. ಚತುಷ್ಪಥ ರಸ್ತೆ ನಿರ್ಮಾಣ, ಆಯ್ದ ಪ್ರದೇಶಗಳಲ್ಲಿ ತಡೆಗೋಡೆ ನಿರ್ಮಾಣ, ಆರ್‌ಸಿಸಿ ಚರಂಡಿ ಕಾಮಗಾರಿ ಹಾಗೂ ಭೂಸ್ವಾಧೀನ ವೆಚ್ಚಕ್ಕೆ ಸಂಬಂಧಿಸಿದಂತೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಈ ಪ್ರಸ್ತಾವನೆಯನ್ನು ಪರಿಗಣಿಸಿದ ಸಚಿವ ಸಂಪುಟವು ₹13 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೆ ಅನುಮೋದನೆ ನೀಡಿದೆ.

ಜಿಲ್ಲೆಯ ದೀರ್ಘಕಾಲದ ಬೇಡಿಕೆ ಈಡೇರಿದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ Dinesh Gundu Rao ಅವರು ಮುಖ್ಯಮಂತ್ರಿ Siddaramaiah ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular