ಮಂಗಳೂರು : ನ್ಯೂ ಶೈನ್ ಎಂಟರ್ ಪ್ರೈಸಸ್ ಎಂಬ ಲಕ್ಕಿ ಸ್ಕೀಮ್ ಹಾಗೂ ನ್ಯೂ ಇಂಡಿಯಾ ರಾಯಲ್ ಸ್ಕೀಮ್ & ಗ್ರೀನ್ ಲೈಟ್ ಲಕ್ಕಿ ಸ್ಕೀಮ್ ಎಂಬ ಲಕ್ಕಿ ಸ್ಕೀಮ್ ನಲ್ಲಿ ಪ್ರತೀ ತಿಂಗಳು ಗ್ರಾಹಕರಿಂದ 1000/- ಪಾವತಿಸಿ ಕೊನೆಯ 2 ತಿಂಗಳು 1500/- ಈಗ ಕಟ್ಟಿದ ಹಣ ಮರುಪಾವತಿ ಹಾಗೂ ಆಕರ್ಷಕ ಬಹುಮಾನ ನೀಡದೆ ಗ್ರಾಹಕರಿಗೆ ಮೋಸ ಮಾಡಿದ ಪ್ರಕರಣಕ್ಕೆ ಪ್ರತ್ಯೇಕ ಪ್ರಕರಣದಲ್ಲಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
9 ತಿಂಗಳು 1000/- ಪಾವತಿಸಿ ಕೊನೆಯ 2 ತಿಂಗಳು 1500/- ಹೀಗೆ ಒಟ್ಟು 11 ತಿಂಗಳ ಅವಧಿಗೆ ದುಡ್ಡನ್ನು ಸ್ವೀಕರಿಸಿ ಈ ಮಧ್ಯೆ 9 ತಿಂಗಳು 1000/- ಪಾವತಿಸಿ ಕೊನೆಯ 2 ತಿಂಗಳು 1500/- ಹೀಗೆ ಒಟ್ಟು 11 ತಿಂಗಳ ಲಕ್ಕಿ ಸ್ಕೀಮ್ ನ ಹೆಸರಿನಲ್ಲಿ ಆಕರ್ಷಕ ಬಹುಮಾನ, ಬಂಪರ್ ಬಹುಮಾನಗಳಾದ ಕಾರು, ಬೈಕು, ಪ್ಲಾಟ್, ಸೈಟ್, ಚಿನ್ನದ ಉಂಗುರಗಳು ಮತ್ತು ನಗದುಗಳನ್ನು ಲಕ್ಕಿ ಡ್ರಾ ನಲ್ಲಿ ಸಿಕ್ಕಿದವರಿಗೆ ಇವುಗಳನ್ನು ಕೊಡುವುದಾಗಿ ತಿಳಿಸಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸುಮಾರು 4 ಕೋಟಿ 20 ಲಕ್ಷಕ್ಕೂ ಮೀರಿದ 3 ಸಾವಿರ ಜನರಿಗೆ ಲಕ್ಕಿ ಸ್ಕೀಮ್ ಕಂತು ಮುಗಿದ ನಂತರ ಡೆಪಾಸಿಟ್ ಮಾಡಿದ ಹಣ ಹಾಗೂ ಸರಿಯಾದ ಬಹುಮಾನಗಳನ್ನು ನೀಡದೇ ಮತ್ತು ಎಲ್ಲರಿಗೂ ಹಣವನ್ನು ನೀಡುತ್ತೇವೆ ಎಂದು ಆಶ್ವಾಸನೆ ನೀಡುತ್ತಾ ಕಾಟಿಪಳ್ಳ 2ನೇ ಬ್ಲಾಕ್ ಸಂಶುದ್ದೀನ್ ಸರ್ಕಲ್ ಬಳಿ ಇರುವ ಆಯಿಷಾ ಕಟ್ಟಡದಲ್ಲಿರುವ ನ್ಯೂ ಶೈನ್ ಎಂಟರ್ ಪ್ರೈಸಸ್ ಕಛೇರಿಯನ್ನು ಏಕಾಏಕಿಯಾಗಿ ಬಂದ್ ಮಾಡಿ ಸಾರ್ವಜನಿಕರಿಗೆ ಆಸೆ ಹುಟ್ಟಿಸಿ ವಂಚಿಸಿದ್ದು ಆರೋಪಿಗಳಾದ ಕಾಟಿಪಳ್ಳ ನಿವಾಸಿ ಅಹಮ್ಮದ್ ಖುರೇಶಿ (34) ವರ್ಷ, ಹಾಗೂ ನಝೀರ್ ( 39) ನಾಸೀರ್ ರನ್ನು ಬಂಧಿಸಿದ್ದಾರೆ.
ಇವರ ವಿರುದ್ಧ ವ್ಯಕ್ತಿಯೊಬ್ಬರು ದೂರು ನೀಡಿದ್ದು ಇದೊಂದು ಅನಿಯಂತ್ರಿತ ಠೇವಣಿ ಯೋಜನೆ ಆಗಿದ್ದು ಸಂಬಂಧಪಟ್ಟ ಪ್ರಾಧಿಕಾರದಿಂದ ಯಾವುದೇ ಪೂರ್ವಾನುಮತಿ ಇಲ್ಲದೇ ಸಾರ್ವಜನಿಕರಿಂದ ನ್ಯೂ ಶೈನ್ ಎಂಟರ್ ಪ್ರೈಸಸ್ ಹೆಸರಿನಲ್ಲಿ ಸುಮಾರು 4 ಕೋಟಿ 20 ಲಕ್ಷಕ್ಕಿಂತ ಅಧಿಕ ಹಣ ಸಂಗ್ರಹಣೆ ಮಾಡಿ ವಂಚನೆಗೈದು, ನಂಬಿಕೆ ದ್ರೋಹ, ವಂಚನೆಗೈದ ಬಗ್ಗೆ ದಿನಾಂಕ: 16.08.2025 ರಂದು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಅ.ಕ್ರ 107/2025 ಕಲಂ 316(2), 318(4) ಬಿ.ಎನ್.ಎಸ್ ಮತ್ತು ಕಲಂ 21 ಅನಿಯಂತ್ರಿತ ಠೇವಣಿ ನಿಷೇಧ ಕಾಯ್ದೆ (BUDS Act) ರಂತೆ ಪ್ರಕರಣ ದಾಖಲಾಗಿದೆ. ಆರೋಪಿ ಅಹಮ್ಮದ್ ಖುರೇಶಿಯ ಹೇಳಿಕೆಯಲ್ಲಿ ವಫಾ ಎಂಟರ್ ಪ್ರೈಸಸ್ ಲಕ್ಕಿ ಸ್ಕೀಂ ನ ಅಬ್ದುಲ್ ವಹಾಬ್ ಮತ್ತು ಬಶೀರ್ ಇವರೊಂದಿಗೆ ಸೇರಿ ಈ ಹಿಂದೆ ನಡೆಸಿರುವ ಲಕ್ಕಿ ಸ್ಕೀಮ್ ನ ಯೋಜನೆಗಳ ಬಗ್ಗೆ ಕೂಡ ತನಿಖೆಯನ್ನು ಮಾಡಲಾಗುತ್ತಿದೆ ಎಂಬ ಮಾಹಿತಿ ದೊರೆತಿದೆ. ಆರೋಪಿ ಪೈಕಿ ಅಹಮ್ಮದ್ ಖುರೇಶಿ ಈತನ ಮೇಲೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ 2 ಕೊಲೆಯತ್ನ ಪ್ರಕರಣಗಳು, ಮತ್ತು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಸರಕಾರಿ ನೌಕರನಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ 1 ಪ್ರಕರಣ ದಾಖಲಾಗಿದೆ. ಆರೋಪಿ ನಝೀರ್ ಯಾನೇ ನಾಸೀರ್ ಈತನ ಮೇಲೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ 1 ಕೊಲೆಯತ್ನ ಪ್ರಕರಣ ದಾಖಲಾಗಿದೆ. ಈ ಆರೋಪಿಗಳು ಆಯಿಷಾ ಕಾಂಪ್ಲೆಕ್ಸ್ ನ ಕಛೇರಿ, ಬಿ.ಎಂ.ಆರ್ ಕಾಂಪ್ಲೆಕ್ಸ್ ನ ಕಛೇರಿ ಹಾಗೂ ಶೈನ್ ಮಾರ್ಟ್ ಕಛೇರಿಯಲ್ಲಿ ಕೃತ್ಯಕ್ಕೆ ಉಪಯೋಗಿಸಿದ ಕಂಪ್ಯೂಟರ್ ಉಪಕರಣಗಳು, ಡ್ರಾ ಕಾಯಿನ್, ಲಕ್ಕಿ ಡ್ರಾ ಪೆಟ್ಟಿಗೆ, ರಿಜಿಸ್ಟರ್ ಗಳು, ಡಿವಿಆರ್ ಗಳನ್ನು ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ಹೆಸರಿನಲ್ಲಿರುವ ಬ್ಯಾಂಕ್ ಖಾತೆಗಳು, ಚಿನ್ನಾಭರಣಗಳ ಖರೀದಿ, ನಿವೇಶನ, ವಾಹನ ಖರೀದಿ, ಮನೆ, ಕಛೇರಿಯಲ್ಲಿದ್ದ ಕಂಪ್ಯೂಟರ್ ಉಪಕರಣಗಳನ್ನು ಹಾಗೂ ಇನ್ನಿತರ ದಾಖಲಾತಿಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ.
ಈ ಕಾಯ್ದೆಯಂತೆ ಆರೋಪಿತರು ಲಕ್ಕಿ ಸ್ಕೀಮ್ ನ ಹಣದಲ್ಲಿ ಖರೀದಿಸಿದ ಮನೆ, ನಿವೇಶನ, ಪ್ಯ್ಲಾಟ್, ವಾಹನಗಳು, ಚಿನ್ನಾಭರಣಗಳು ಹಾಗೂ ಇನ್ನಿತರ ವಸ್ತುಗಳ ಜಪ್ತಿ ಮಾಡಲು ಮಾನ್ಯ ಜಿಲ್ಲಾಧಿಕಾರಿಯವರಿಗೆ, ಉಪ ವಿಭಾಗ ದಂಡಾಧಿಕಾರಿಯವರಿಗೆ, ಕಂದಾಯ ಇಲಾಖೆಯವರಿಗೆ ಪತ್ರ ವ್ಯವಹಾರವನ್ನು ಮಾಡಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಕಾಟಿಪಳ್ಳ 2ನೇ ಬ್ಲಾಕ್ ಸಂಶುದ್ದೀನ್ ಸರ್ಕಲ್ ಬಳಿ ಇರುವ ಬಿ.ಎಂ.ಆರ್ ಕಟ್ಟಡದಲ್ಲಿರುವ ನ್ಯೂ ಇಂಡಿಯಾ ಕಛೇರಿಯನ್ನು ಏಕಾಏಕಿಯಾಗಿ ಬಂದ್ ಮಾಡಿ ಸಾರ್ವಜನಿಕರಿಗೆ ಆಸೆ ಹುಟ್ಟಿಸಿ ವಂಚಿಸಿದ್ದು ಆರೋಪಿಗಳಾದ ಮೊಹಮ್ಮದ್ ಅಶ್ರಫ್ ಬಜಪೆ, ಮೊಹಮ್ಮದ್ ಹನೀಫ್ (೫೦) ಇಬ್ಬರನ್ನು ಬಂಧಿಸಿದ್ದಾರೆ.
ಇವರು ಕೂಡ ತಿಂಗಳು 1000/- ದಂತೆ 1 ವರ್ಷದ ಅವಧಿಗೆ ದುಡ್ಡನ್ನು ಸ್ವೀಕರಿಸಿ ಈ ಮಧ್ಯೆ ಪ್ರತೀ ತಿಂಗಳು ಲಕ್ಕಿ ಸ್ಕೀಮ್ ನ ಹೆಸರಿನಲ್ಲಿ ಆಕರ್ಷಕ ಬಹುಮಾನ, ಬಂಪರ್ ಬಹುಮಾನಗಳಾದ ಕಾರು, ಬೈಕು, ಪ್ಯ್ಲಾಟ್, ಸೈಟ್, ಚಿನ್ನದ ಉಂಗುರಗಳು ಮತ್ತು ನಗದುಗಳನ್ನು ಲಕ್ಕಿ ಡ್ರಾ ನಲ್ಲಿ ಸಿಕ್ಕಿದವರಿಗೆ ಇವುಗಳನ್ನು ಕೊಡುವುದಾಗಿ ತಿಳಿಸಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸುಮಾರು 10 ಕೋಟಿಗೂ ಮೀರಿದ 13 ಸಾವಿರ ಜನರಿಗೆ ಲಕ್ಕಿ ಸ್ಕೀಮ್ ಕಂತು ಮುಗಿದ ನಂತರ ಡೆಪಾಸಿಟ್ ಮಾಡಿದ ಹಣ ಹಾಗೂ ಸರಿಯಾದ ಬಹುಮಾನಗಳನ್ನು ನೀಡದೇ ಮತ್ತು ಎಲ್ಲರಿಗೂ ಹಣವನ್ನು ನೀಡುತ್ತೇವೆ ಎಂದು ಆಶ್ವಾಸನೆ ನೀಡುತ್ತಾ ಬಂದಿದ್ದು ಈ ಹಿನ್ನೆಲೆ ಗ್ರಾಹಕರ ದೂರಿನನ್ವಯ ಇಬ್ಬರನ್ನು ಬಂಧಿಸಿದ್ದಾರೆ.
ದೂರಿನಲ್ಲಿ ಸಂಬಂಧಪಟ್ಟ ಪ್ರಾಧಿಕಾರದಿಂದ ಯಾವುದೇ ಪೂರ್ವಾನುಮತಿ ಇಲ್ಲದೇ ಸಾರ್ವಜನಿಕರಿಂದ ನ್ಯೂ ಇಂಡಿಯಾ ರಾಯಲ್ ಲೈಫ್ ಸ್ಕೀಮ್ ಹೆಸರಿನಲ್ಲಿ ಸುಮಾರು 10 ಕೋಟಿಗಿಂತ ಅಧಿಕ ಹಣ ಸಂಗ್ರಹಣೆ ಮಾಡಿ ವಂಚನೆಗೈದು, ನಂಬಿಕೆ ದ್ರೋಹ ಮಾಡಿದ ಬಗ್ಗೆ ದಿ. 11 ರಂದು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಅ.ಕ್ರ 104/2025 ಕಲಂ 316(2), 318(4) ಬಿ.ಎನ್.ಎಸ್ ಮತ್ತು ಕಲಂ 21 ಅನಿಯಂತ್ರಿತ ಠೇವಣಿ ನಿಷೇಧ ಕಾಯ್ದೆ (BUDS Act) ಯಂತೆ ಪ್ರಕರಣ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಮೊಹಮ್ಮದ್ ಅಶ್ರಫ್ ಬಜಪೆ ಹಾಗೂ ಮೊಹಮ್ಮದ್ ಹನೀಫ್ ರವರನ್ನು ದಿ. 12 ರಂದು ದಸ್ತಗಿರಿ ಮಾಡಲಾಗಿದ್ದು ನಂತರ 13 ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ 7 ದಿನಗಳ ಪೊಲೀಸ್ ಕಸ್ಟಡಿಗೆ ಪಡೆದು ನಂತರ ೧೯ ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗಳಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಗಳು ಈ ಹಿಂದೆ ಮಾಡಿದ ನ್ಯೂ ಇಂಡಿಯಾ ಪ್ರೀಮಿಯಂ ಸ್ಕೀಮ್ ಮತ್ತು ನ್ಯೂ ಇಂಡಿಯಾ ಬಂಪರ್ ಸ್ಕೀಮ್ ಗಳನ್ನು ಸಹ ತನಿಖೆಯನ್ನು ಮಾಡಲಾಗುವುದು.
ಆರೋಪಿಗಳ ಹೆಸರಿನಲ್ಲಿರುವ ಬ್ಯಾಂಕ್ ಖಾತೆಗಳು, ಚಿನ್ನಾಭರಣಗಳ ಖರೀದಿ, ನಿವೇಶನ, ವಾಹನ ಖರೀದಿ, ಬೋಳೂರು ಗ್ರಾಮದ ಮನೆ, ಬಜಪೆಯಲ್ಲಿರುವ ಮನೆ, ಬಜಪೆ ತಾರಿಕಂಬ್ಳದಲ್ಲಿರುವ 5 ಪ್ಲ್ಯಾಟ್ ಗಳು, ಕಛೇರಿಯಲ್ಲಿದ್ದ ಕಂಪ್ಯೂಟರ್ ಉಪಕರಣಗಳನ್ನು ಹಾಗೂ ಇನ್ನಿತರ ದಾಖಲಾತಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಕಾಯ್ದೆಯಂತೆ ಆರೋಪಿತರು ಲಕ್ಕಿ ಸ್ಕೀಮ್ ನ ಹಣದಲ್ಲಿ ಖರೀದಿಸಿದ ಮನೆ, ನಿವೇಶನ, ಪ್ಲ್ಯಾಟ್, ವಾಹನಗಳು, ಚಿನ್ನಾಭರಣಗಳು ಹಾಗೂ ಇನ್ನಿತರ ವಸ್ತುಗಳ ಜಪ್ತಿ ಮಾಡಲು ಮಾನ್ಯ ಜಿಲ್ಲಾಧಿಕಾರಿಯವರಿಗೆ, ಉಪ ವಿಭಾಗ ದಂಡಾಧಿಕಾರಿಯವರಿಗೆ, ಕಂದಾಯ ಇಲಾಖೆಯವರಿಗೆ ಪತ್ರ ವ್ಯವಹಾರವನ್ನು ಮಾಡಲಾಗಿದೆ. ಲಕ್ಕಿ ಸ್ಕೀಮ್ ಗಳಿಗೆ ಸೇರಿದ ಸದಸ್ಯರು ಹಾಗೂ ಸದಸ್ಯರಿಂದ ಹಣ ಸಂಗ್ರಹಣೆ ಮಾಡಿದ ಏಜೆಂಟ್ ರವರುಗಳು ಸಂಬಂಧಿಸಿದ ದಾಖಲಾತಿಯೊಂದಿಗೆ ಠಾಣೆಗೆ ಬಂದು ಹೇಳಿಕೆಯನ್ನು ನೀಡಿದ್ದಾರೆ.


