Friday, March 13, 2026
Flats for sale
Homeಜಿಲ್ಲೆಮಂಗಳೂರು : ಚುನಾವಣೆ ಸಮಯದಲ್ಲಿ ನೆನೆಸಿದ ದೈವಗಳ ಹರಕೆ ಕೋಲ ನೆರವೇರಿಸಿದ ಯು ಟಿ ಖಾದರ್,ಪ್ರಸಾದ...

ಮಂಗಳೂರು : ಚುನಾವಣೆ ಸಮಯದಲ್ಲಿ ನೆನೆಸಿದ ದೈವಗಳ ಹರಕೆ ಕೋಲ ನೆರವೇರಿಸಿದ ಯು ಟಿ ಖಾದರ್,ಪ್ರಸಾದ ತಲೆಗೆ ಮೆತ್ತಿ ನರಕಕ್ಕೆ ಹೋಗು ಎಂದ ಮುಸ್ಲಿಂ ಧಾರ್ಮಿಕ ಮುಖಂಡ.

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ಅಂದರೆ ಅದು ದೈವ ದೇವರುಗಳ ತವರೂರು,ಇದಕ್ಕೂ ಇತಿಹಾಸ ಇದೆ ಇಲ್ಲಿ ದೈವ ದೇವರುಗಳನ್ನು ನಂಬಿದವರನ್ನು ಕೈ ಬಿಡುವುದಿಲ್ಲವೆಂಬುದು ನಂಬಿಕೆ.ಆದರೆ ಮುಸ್ಲಿಂ ಮುಖಂಡ ಧೈರಾಧನೆ ಮಾಡುವುದು ಮುಸ್ಲಿಂ ಸಮುದಾಯಕ್ಕೆ ಮಾಡುವ ಅವಮಾನ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದಾನೆ.

ಕರ್ನಾಟಕ ರಾಜ್ಯದ ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಅವರು ಬಂಟ್ವಾಳ ತಾಲೂಕಿನ ಶ್ರೀ ಕ್ಷೇತ್ರ ಪನೋಲಿ ಬೈಲ್‌ನಲ್ಲಿ ನಡೆದ ತುಳುನಾಡಿನ ಕಾರ್ಣಿಕ ದೈವಗಳ ಹರಕೆ ಕೋಲ ನೆರವೇರಿಸಿ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲದಲ್ಲಿ ಭಾಗವಹಿಸಿ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಆಶೀರ್ವಾದ ಪಡೆಡಿದ್ದರು.ಈ ಬಗ್ಗೆ ಯು.ಟಿ ಖಾದರ್ ವಿರುದ್ಧ ಮುಸ್ಲಿಂ ಮುಖಂಡನೋರ್ವ ವಿರೋಧ ವ್ಯಕ್ತಪಡಿಸಿದ್ದಾರೆ.ಮುಸ್ಲಿಂ ಧಾರ್ಮಿಕ ಮುಖಂಡ ಸಾಲೆತ್ತೂರು ಫೈಝಿ ಎಂಬುವವರು ಯು.ಟಿ. ಖಾದರ್ ಬಗ್ಗೆ ಆಕ್ಷೇಪಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು ಉಲೆಮಾ, ಸಾತ್ವಿಕರು ತುಂಬಿದ ಧಾರ್ಮಿಕ ವೇದಿಕೆಗೆ ಮುಸ್ಲಿಂ ನಾಯಕನಾಗಿ ಹತ್ತಿಸುವುದು ತರವಲ್ಲ. ಅದು ಆತನ ಭೂತಾರಾಧನೆಗೆ ನಾವು ಕೊಡುವ ಅಂಗೀಕಾರವಾಗಿತ್ತೆ. ಖಾದರ್ ಕೊರಗಜ್ಜನಿಗೂ ಕಲ್ಲುರ್ಟಿ, ಪಂಜುರ್ಲಿಗೂ ಆರಾಧಿಸಲಿ‌. ಪ್ರಸಾದ ಪಡೆದು ತಲೆಗೆ ಮತ್ತಿಕೊಂಡು ನರಕಕ್ಕೆ ಹೋಗಲಿ‌ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾನೆ.

ಆತನ ವೈಯಕ್ತಿಕ ಸ್ವತಂತ್ರ‌. ಅದು ಭಾರತದಲ್ಲಿ ಎಲ್ಲರಿಗೂ ಇರುವ ಸಂವಿಧಾನಿಕ ಸ್ವಾತಂತ್ರ. ಅದನ್ನು ತಡೆಯುವ ಹಕ್ಕು ನನಗಿಲ್ಲ. ಆದರೆ ಧಾರ್ಮಿಕ ನಾಯಕನಾಗಿ ನಾವು ಅಂಗೀಕರಿಸುವುದು, ಆತನ ಭೂತಾರಾಧನೆಯನ್ನು ನಾವು ಒಪ್ಪಿಕೊಂಡಂತಾಗುತ್ತದೆ. ಉಲಮಾಗಳು ಅವನಿಗೆ ಗೌರವ ಕೊಡುವುದು ಮುಸ್ಲಿಂ ಸಮುದಾಯಕ್ಕೆ ಕೆಟ್ಟ ಸಂದೇಶವಾಗಿ ಪರಿಣಮಿಸುತ್ತದೆ ಎಂದು ಯು.ಟಿ.ಖಾದರ್ ನಡವಳಿಕೆ ಆಕ್ಷೇಪಿಸಿ ಸಾಲೆತ್ತೂರು ಫೈಝಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಜಿಲ್ಲೆಯಲ್ಲಿ ಅನೇಕ ಮುಸ್ಲಿಮರು ಕೊರಗಜ್ಜ ಸೇರಿ ದೈವ ದೇವರುಗಳಿಗೆ ವಾರ್ಷಿಕ ಕೋಲದ ಸಮಯದಲ್ಲಿ ಸಹಾಯಹಸ್ತ ಮಾಡುವುದು ಹರಕೆ ತೀರಿಸುವುದು ಮೊದಲಿನಿಂದಲೂ ನಡೆಯುತ್ತಾ ಬಂದಿದೆ ಆದರೆ ಯಾರೂ ಇದರ ಬಗ್ಗೆ ಪ್ರಚಾರ ಮಾಡವುದಿಲ್ಲ ಅದು ಅವರವರಿಗೆ ಬಿಟ್ಟ ನಂಬಿಕೆ ಎಂದು ಮಂಗಳೂರು ನಿವಾಸಿ ಒಬ್ಬರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular