Sunday, July 26, 2026
Homeಜಿಲ್ಲೆಮಂಗಳೂರು: ಕರ್ನಾಟಕ ರಾಜ್ಯೋತ್ಸವ ಅದ್ಧೂರಿಯಾಗಿ ಆಚರಣೆ.

ಮಂಗಳೂರು: ಕರ್ನಾಟಕ ರಾಜ್ಯೋತ್ಸವ ಅದ್ಧೂರಿಯಾಗಿ ಆಚರಣೆ.

ಮಂಗಳೂರು: ಕರ್ನಾಟಕ ರಾಜ್ಯೋತ್ಸವ ಆಚರಣೆಯ ನಿಮಿತ್ತ ನಗರದ ನೆಹರು ಮೈದಾನದಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ತ್ರಿವರ್ಣ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು.

ಮೂಲ ಸೌಕರ್ಯಗಳನ್ನು ಒದಗಿಸುವ ಮೂಲಕ ಗ್ರಾಮೀಣ ಪ್ರದೇಶಗಳ ಸರ್ವಾಂಗೀಣ ಅಭಿವೃದ್ಧಿಗೆ ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಸಚಿವರು ತಮ್ಮ ಭಾಷಣದಲ್ಲಿ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 3.44 ಲಕ್ಷ ಫಲಾನುಭವಿಗಳು ಗೃಹ ಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಸಿಕೊಂಡಿದ್ದು, ತಾಂತ್ರಿಕ ಸಮಸ್ಯೆಯಿಂದ ಹಣ ಜಮಾ ಆಗದ ಫಲಾನುಭವಿಗಳ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಅನ್ನ ಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ 248 ಲಕ್ಷ ಫಲಾನುಭವಿಗಳು ಇದ್ದಾರೆ ಎಂದು ತಿಳಿಸಿದರು.

ವಿವಿಧ ಯೋಜನೆಗಳ ಅನುಷ್ಠಾನದ ಬಗ್ಗೆ ಸಚಿವರು ಮಾಹಿತಿ ನೀಡಿದರು.

ಸ್ಪೀಕರ್ ಯು ಟಿ ಖಾದರ್, ಸಂಸದ ನಳಿನ್ ಕುಮಾರ್ ಕಟೀಲ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಶಾಸಕ ವೇದವ್ಯಾಸ್ ಕಾಮತ್, ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಎಸ್ಪಿ ರಿಷ್ಯಂತ್, ಜಿಪಂ ಸಿಇಒ ಡಾ.ಆನಂದ್ ಮತ್ತಿತರರು ಉಪಸ್ಥಿತರಿದ್ದರು.
RELATED ARTICLES

LEAVE A REPLY

Please enter your comment!
Please enter your name here

Most Popular