ಮಂಗಳೂರು : ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರ 2024 ರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜೂನ್ 1 ರಂದು ಸಂಜೆ 4 ರಿಂದ ಜೂನ್ 3 ಮಧ್ಯರಾತ್ರಿಯವರೆಗೆ ಮದ್ಯ ಮಾರಾಟ ನಿಶೇಧಿಷಲಾಗಿದೆ.
“ಶಾಂತಿಯುತ ವಾತಾವರಣದಲ್ಲಿ ನ್ಯಾಯಸಮ್ಮತ ಮತ್ತು ಮುಕ್ತ ಚುನಾವಣೆಗಳನ್ನು ನಡೆಸುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಅನುವು ಮಾಡಿಕೊಡಲು ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಎಲ್ಲಾ ಮದ್ಯ ಮಾರಾಟ ಮಳಿಗೆಗಳು, ಮದ್ಯದ ಡಿಪೋಗಳು, ಮದ್ಯ ತಯಾರಿಕಾ ಡಿಸ್ಟಿಲರಿಗಳು, ಸ್ಟಾರ್ ಹೋಟೆಲ್‌ಗಳು ಮತ್ತು ಟಾಡಿ ಅಂಗಡಿಗಳು ಅವಧಿಯವರೆಗೆ ಮುಚ್ಚಲ್ಪಡುತ್ತವೆ ಎಂದು ಜಿಲ್ಲಾಧಿಕಾರಿಯವರ ಆದೇಶದಲ್ಲಿ ತಿಳಿಸಲಾಗಿದೆ.