Monday, May 25, 2026
Flats for sale
Homeಜಿಲ್ಲೆಮಂಗಳೂರು: “ಟ್ಯಾಬ್ಲೆಟ್ ಆರೀಫ್” ಕೊಲೆ ಪ್ರಕರಣ – ಮತ್ತೋರ್ವ ಆರೋಪಿಯ ಬಂಧನ.

ಮಂಗಳೂರು: “ಟ್ಯಾಬ್ಲೆಟ್ ಆರೀಫ್” ಕೊಲೆ ಪ್ರಕರಣ – ಮತ್ತೋರ್ವ ಆರೋಪಿಯ ಬಂಧನ.

ಮಂಗಳೂರು ; ಮಂಗಳೂರು ನಗರ ಪೋಲಿಸ್ ವ್ಯಾಪ್ತಿಯ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ “ಟ್ಯಾಬ್ಲೆಟ್ ಆರೀಫ್” ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮೊಹಮ್ಮದ್ ಇಬ್ರಾಹಿಂ ಸಿನಾನ್ @ ಚಿನ್ನು (21) ಎಂದು ಗುರುತಿಸಲಾಗಿದೆ. ಈತ ಮಂಗಳೂರಿನ ಬಜಾಲ್ ನಂತೂರು ಪ್ರದೇಶದ ನಿವಾಸಿಯಾಗಿದ್ದು, ಪ್ರಸ್ತುತ ಪಡೀಲ್ ವಿಜಯನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾನೆ. ದಿನಾಂಕ 27-03-2026ರಂದು ಬೆಳಗಿನ ಜಾವ ತೊಕ್ಕೊಟ್ಟು ಫ್ಲೈಓವರ್ ಮೇಲಿಂದ ಬೈಕ್‌ನಲ್ಲಿ ಸಂಚರಿಸುತ್ತಿದ್ದ ಆರೀಫ್ ಹುಸೈನ್ ಅಲಿಯಾಸ್ “ಟ್ಯಾಬ್ಲೆಟ್ ಆರೀಫ್” ಅವರನ್ನು ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಕೆಡವಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದರು. ಬಳಿಕ ಕೃತ್ಯಕ್ಕೆ ಬಳಸಿದ ಕಾರನ್ನು ಬಂಟ್ವಾಳ ತಾಲೂಕಿನ ಬುಡೋಳಿ ಪ್ರದೇಶದಲ್ಲಿ ಬಿಟ್ಟು ಪರಾರಿಯಾಗಿದ್ದರು.ಪ್ರಕರಣವನ್ನು ಬಳಿಕ ಸಿಸಿಬಿಗೆ ವರ್ಗಾಯಿಸಲಾಗಿದ್ದು, ತನಿಖೆ ವೇಳೆ ಆರೋಪಿಯು ಫೆಬ್ರವರಿ 2026ರಲ್ಲಿ ನಡೆದ ಕೊಲೆ ಸಂಚು ಸಭೆಯಲ್ಲಿ ಭಾಗಿಯಾಗಿದ್ದುದಲ್ಲದೆ, ಕೊಲೆ ಕೃತ್ಯದಲ್ಲಿ ಭಾಗಿಯಾದ ಆರೋಪಿಗಳಿಗೆ ಹಣಕಾಸಿನ ನೆರವು ನೀಡಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಸಿನಾನ್ ವಿರುದ್ಧ ಈಗಾಗಲೇ: 2025ರಲ್ಲಿ ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಕೊಲೆಯತ್ನ ಪ್ರಕರಣ 2024ರಲ್ಲಿ ಮಂಗಳೂರು ಉತ್ತರ ಠಾಣಾ ವ್ಯಾಪ್ತಿಯ ಹಲ್ಲೆ ಪ್ರಕರಣ ಸೇರಿದಂತೆ ಎರಡು ಪ್ರಕರಣಗಳು ದಾಖಲಾಗಿವೆ. ಅಲ್ಲದೆ, ಈತ ಮೃತ ರೌಡಿಶೀಟರ್ “ಟೊಪ್ಪಿ ನೌಫಾಲ್”ನ ಸಹೋದರನಾಗಿರುವುದಾಗಿ ತಿಳಿದುಬಂದಿದೆ.

ಈ ಪ್ರಕರಣದಲ್ಲಿ ಈಗಾಗಲೇ: ಮೊಹಮ್ಮದ್ ರಿಫಾತ್ ಆಲಿ, ಇಬ್ರಾಹಿಂ ಖಲೀಲ್, ಅಶ್ಫಕ್ @ ಜುಟ್ಟು ಅಶ್ಫಕ್, ಉಮ್ಮರ್ ಫಾರೂಕ್ ಇರ್ಫಾನ್, ಮೊಹಮ್ಮದ್ ಶಾಕೀರ್, ಮೊಹಮ್ಮದ್ ರಿಜ್ವಾನ್ @ ರಿಜ್ವಾನ್, ಮೊಹಮ್ಮದ್ ಇರ್ಷಾದ್ @ ಅಕುಡು, ಮಹಮ್ಮದ್ ಹರ್ಷಾದ್, ನಿಶಾಕ್ @ ಪುಚ್ಚೆ ನಿಶಾಕ್, ಬಿ. ಜುನೈದ್ @ ಕೊಕ್ಕಡ ಜುನೈದ್ ಹಾಗೂ ಮೊಹಮ್ಮದ್ ಸುಹೇಲ್ @ ಚಿಯಾ ಸೇರಿದಂತೆ ಹಲವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಪ್ರಸ್ತುತ ಬಂಧಿತ ಆರೋಪಿಗಳೆಲ್ಲರೂ ನ್ಯಾಯಾಂಗ ಬಂಧನದಲ್ಲಿದ್ದು, ಅವರ ವಿರುದ್ಧ “ಕೋಕಾ ಕಾಯಿದೆ” ಅಡಿಯಲ್ಲಿ ತನಿಖೆ ಮುಂದುವರಿದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular