Sunday, November 15, 2026
Homeಜಿಲ್ಲೆಮಂಗಳೂರು : ಡಿಸೆಂಬರ್ 2ರಿಂದ ಆರಂಭವಾಗುವ ಬೆಳಗಾವಿ ಅಧಿವೇಶನದಲ್ಲಿ ಕಾಯ್ದೆ ಹಿಂಪಡೆಯುವ ನಿರೀಕ್ಷೆ,46 ಪ್ರಕರಣಗಳ ರದ್ದತಿಗೆ...

ಮಂಗಳೂರು : ಡಿಸೆಂಬರ್ 2ರಿಂದ ಆರಂಭವಾಗುವ ಬೆಳಗಾವಿ ಅಧಿವೇಶನದಲ್ಲಿ ಕಾಯ್ದೆ ಹಿಂಪಡೆಯುವ ನಿರೀಕ್ಷೆ,46 ಪ್ರಕರಣಗಳ ರದ್ದತಿಗೆ ಒತ್ತಾಯ : ಐವನ್ ಡಿಸೋಜ.

ಮಂಗಳೂರು: ರಾಜ್ಯದಲ್ಲಿ ಜಾರಿಯಲ್ಲಿರುವ ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ತಿಳಿಸಿದ್ದಾರೆ.

ಮಂಗಳೂರಿನ ಲಾಲ್‌ಬಾಗ್‌ನಲ್ಲಿರುವ ತಮ್ಮ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2022ರಲ್ಲಿ ಅಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಿಂಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು ಎಂದು ಹೇಳಿದರು.

ಡಿಸೆಂಬರ್ 2ರಿಂದ ಬೆಳಗಾವಿಯಲ್ಲಿ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಕಾಯ್ದೆ ಹಿಂಪಡೆಯುವ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ಗೆ ಸಂಖ್ಯಾಬಲ ಇರುವುದರಿಂದ ಕಾಯ್ದೆ ಹಿಂಪಡೆಯಲು ಅನುಕೂಲವಾಗಲಿದೆ ಎಂದು ತಿಳಿಸಿದ ಐವನ್ ಡಿಸೋಜಾ, ಈ ಕಾಯ್ದೆಯಡಿ ದಾಖಲಾಗಿರುವ 46 ಪ್ರಕರಣಗಳನ್ನು ರದ್ದುಗೊಳಿಸಬೇಕೆಂದು ಹೋರಾಟಗಾರರು ಒತ್ತಾಯಿಸಿದ್ದಾರೆ ಎಂದರು.

ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ವಿಚಾರ ಮತ್ತೆ ಚರ್ಚೆಗೆ ಬರುವ ಸಾಧ್ಯತೆಯಿದ್ದು, ಸರ್ಕಾರದ ಮುಂದಿನ ನಿರ್ಧಾರದ ಬಗ್ಗೆ ಕುತೂಹಲ ಮೂಡಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular