ಮಂಗಳೂರು : ಗಡಿ ಭಾಗದ ಜನರು ದಕ್ಷಿಣ ಕನ್ನಡ ಜಿಲ್ಲೆಯನ್ನೇ ಅವರಿಸಿಕೊಂಡಿರುವುದರಿಂದ ಜಿಲ್ಲಾಧಿಕಾರಿ ಹಾಗೂ ಅರೋಗ್ಯ ಇಲಾಖೆ ಸರಿಯಾಗಿ ಹೆಚ್ಚರಿಕೆ ವಹಿಸಿ ಕ್ರಮ ಕೈಗೊಂಡರೆ ಒಂದೊಂದು ಜೀವ ಉಳಿಸಬಹುದು ಎಂಬುದು ಅನುಭವದ ಮಾತು. ನೆರೆಯ ಕೇರಳ ರಾಜ್ಯದಲ್ಲಿ ಕೋವಿಡ್ 19ರ ಉಪತಳಿ ಜೆಎನ್.1 ಪ್ರಕರಣ ಪತ್ತೆಯಾಗಿರುವ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಗಡಿಭಾಗದಲ್ಲಿ ಐದು ಚೆಕ್‌ಪೋಸ್ಟ್‌ಗಳನ್ನು ತೆರೆದು, ಸಿಬ್ಬಂದಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ ತಿಳಿಸಿದ್ದಾರೆ ,ಆದರೆ ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನರ ಸಂಬಂದಿ ಕಾಯಿಲೆಯಿಂದ ಬಳಲುತ್ತಿದ್ದ ಉಡುಪಿ ಮೂಲದ ವ್ಯಕ್ತಿಗೆ ಕೊರೊನ ಪಾಸಿಟಿವ್ ಆಗಿದ್ದು ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ .
‘ಕೇರಳ ರಾಜ್ಯದ ಜನರು ತಮ್ಮ ದೈನಂದಿನ ಚಟುವಟಿಕೆ ಹಾಗೂ ಆರೋಗ್ಯ ಸೇವೆಗೆ ಮಂಗಳೂರನ್ನು ಅವಲಂಬಿಸಿರುವುದರಿಂದ ಇಲ್ಲಿ ಹೆಚ್ಚು ಪ್ರಕರಣಗಳು ದಾಖಲಾಗುವ ಸಾಧ್ಯತೆ ಇದೆ. ಹೀಗಾಗಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸೂಚನೆಯಂತೆ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ, ಸೋಂಕಿತರನ್ನು ಪತ್ತೆ ಮಾಡಲು ಹಾಗೂ ವೈರಾಣು ಹರಡುವುದನ್ನು ತಡೆಗಟ್ಟಲು ಎಲ್ಲ ಸಿದ್ಧತೆ ನಡೆಸಿದೆ, ಜನರು ಆತಂಕಪಡುವ ಅಗತ್ಯವಿಲ್ಲ’ ಎಂದು ಅರೋಗ್ಯ ಅಧಿಕಾರಿ ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ .
ದೈನಂದಿನ ರೈಲಿನಿಂದ ಕೇರಳದಿಂದ ಮಂಗಳೂರಿನ ಕಡೆಗೆ ಸರಿ ಸುಮಾರು ಸಾವಿರಾರು ಜನರು ಬರುತಿದ್ದು ಇಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೆ ಎಂಬುದು ಯಾರಿಗೂ ಗೊತ್ತಿಲ್ಲ. ತಲಪಾಡಿ, ಬಂಟ್ವಾಳ ತಾಲ್ಲೂಕಿನ ಸಾರಡ್ಕ, ಪುತ್ತೂರು ತಾಲ್ಲೂಕಿನ ಸ್ವರ್ಗ ಮತ್ತು ಸುಳ್ಯ ಪದವು, ಸುಳ್ಯ ತಾಲ್ಲೂಕಿನ ಜಾಲ್ಸೂರು ಈ ಐದು ಸ್ಥಳಗಳಲ್ಲಿ ಚೆಕ್‌ಪೋಸ್ಟ್ ತೆರೆಯಲಾಗಿದ್ದು, ಧ್ವನಿವರ್ಧಕದ ಮೂಲಕ ಜಾಗೃತಿ ಮೂಡಿಸಲಾಗುವುದು. ಆದರೆ, ಸದ್ಯ ಯಾವುದೇ ನಿರ್ಬಂಧ ವಿಧಿಸಲಾಗಿಲ್ಲ. ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಗಳಲ್ಲೂ ಧ್ವನಿವರ್ಧಕದ ಮೂಲಕ ಜಾಗೃತಿ ಮೂಡಿಸಲಾಗುವುದು. ಸರ್ಕಾರದ ಹಿರಿಯ ಅಧಿಕಾರಿಗಳು ಮಂಗಳವಾರ ವಿಡಿಯೊ ಕಾನ್ಫರೆನ್ಸ್ ನಡೆಸಿ ಅಗತ್ಯ ಸಲಹೆಗಳನ್ನು ನೀಡಿದ್ದಾರೆ. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಸಿಇಒ ನೇತೃತ್ವದಲ್ಲಿ ಬುಧವಾರ ಇಲ್ಲಿ ಸಭೆ ನಡೆದಿದ್ದು, ಆರೋಗ್ಯ ವ್ಯವಸ್ಥೆಯನ್ನು ಸನ್ನದ್ಧ ಸ್ಥಿತಿಯಲ್ಲಿ ಇಡುವಂತೆ ಅವರು ಸೂಚನೆ ನೀಡಿದ್ದಾರೆ’ ಎಂದು ವಿವರಿಸಿದರು.
ಕೇರಳದಲ್ಲಿ ಜೆಎನ್.1 ತಳಿಯ 27 ಪ್ರಕರಣಗಳು ಪತ್ತೆಯಾಗಿವೆ. ಅವರಲ್ಲಿ ಇಬ್ಬರು ಗುಣಮುಖರಾಗಿ ಮನೆಗೆ ತೆರಳಿದ್ದು, 25 ಮಂದಿ ಹೋಮ್ ಐಸೊಲೇಷನ್‌ನಲ್ಲಿ ಇದ್ದಾರೆ. ಅಲ್ಲಿನ ಜಿಲ್ಲಾ ಆರೋಗ್ಯಾಧಿಕಾರಿ ಸಂಪರ್ಕಿಸಿದಾಗ, ದಿನಕ್ಕೆ ಒಂದು ಅಥವಾ ಎರಡು ಪ್ರಕರಣಗಳು ಮಾತ್ರ ಪತ್ತೆಯಾಗುತ್ತಿವೆ ಎಂದು ತಿಳಿಸಿದ್ದಾರೆ.
ಕಳೆದ ಬಾರಿ ಕೊರೊನದ ಸಮಯದಲ್ಲಿ ಜಿಲ್ಲಾಸ್ಪತ್ರೆಯ ನಿರ್ಲಕ್ಷ್ಯದಿಂದ ಹಲವು ಅಮಾಯಕ ಪ್ರಾಣಗಳನ್ನು ಕಳೆದು ಕೊಂಡಿದ್ದಾರೆ ,ಈ ಸಮಸ್ಯೆಯಿಂದ ಖಾಸಗಿ ಆಸ್ಪತ್ರೆಯ ಒಳಸಂಚಿನಿಂದ ಜಿಲ್ಲಾಸ್ಪತ್ರೆಯೆಯಲ್ಲಿ ಸರಿಯಾದ ಸಮಯಕ್ಕೆ ಚಿಕಿತ್ಸೆ ಕೊಡದ ಕಾರಣ ಹಲವು ಸಾವು ಸಂಭವಿಸದಂತೂ ಸತ್ಯ. ಇವತ್ತಿನ ಪ್ರಕಾರ ದ.ಕ. ಜಿಲ್ಲೆಯಲ್ಲಿ ಲಭ್ಯವಿರುವ ಹಾಸಿಗೆ- 10986 ಆಮ್ಲಜನಕ ಸಹಿತ ಐಸಿಯು ಹಾಸಿಗೆ-1376 ,ಐಸಿಯು ಹಾಸಿಗೆ- 722 ವೆಂಟಿಲೇಟರ್ ಸಹಿತ ಹಾಸಿಗೆ 336 ಇದೆ ಎಂದು ಹೇಳಿಕೆ ನೀಡಿದ್ದಾರೆ ಆದರೆ ಯಾವಾಗಲು ಇಲ್ಲಿ ಹಾಸಿಗೆ ಬಿಟ್ಟು ಆಸ್ಪತ್ರೆಗೆ ದಾಖಲು ಮಾಡುವುದೇ ಕಷ್ಟಕರವಾಗಿದೆ .DHOರವರ ಮಾತು ನಂಬಿ ಬಂದರೆ ನಮ್ಮ ಸಾವು ಖಚಿತ ಅದರಿಂದ ನಮ್ಮ ಆರೋಗ್ಯದ ರಕ್ಷಣೆ ನಮ್ಮ ಹೊಣೆ ಇದು ಅಷ್ಟೇ ನಮ್ಮ ಕಾರ್ಯ ಎಂದು ತಿಳಿಯಬೇಕಾಗಿದೆ.


