ಮಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಮಂಗಳೂರು ದಕ್ಷಿಣ ಕ್ಷೇತ್ರದ ಹಾಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಸೋಮವಾರ ಮಂಗಳೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಕಾಮತ್ ಅವರು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ನಂತರ ಕುದ್ರೋಳಿ ದೇವಸ್ಥಾನದಿಂದ ಮಂಗಳೂರು ಮಹಾನಗರ ಪಾಲಿಕೆವರೆಗೆ ಪಾದಯಾತ್ರೆ ನಡೆಸಲಾಯಿತು. ನಾಯಕನ ಬೆಂಬಲಕ್ಕೆ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು.
ಕಾಮತ್ ಅವರೊಂದಿಗೆ ಸಂಸದ ನಳಿನ್ ಕುಮಾರ್ ಕಟೀಲ್, ಮೇಯರ್ ಜಯಾನಂದ ಅಂಚನ್, ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಕಾರ್ಪೊರೇಟರ್‌ಗಳು ಮತ್ತಿತರರು ಉಪಸ್ಥಿತರಿದ್ದರು.