ಮಂಗಳೂರು : 2012ರ ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಪ್ರಕರಣದ ಅಂದಿನ ತನಿಖಾಧಿಕಾರಿಯಾಗಿದ್ದ ಪೊಲೀಸ್ ಅಧಿಕಾರಿ ಯೋಗೇಶ್ ಅವರನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ವಿಚಾರಣೆಗೆ ಕರೆದಿದೆ ಎಂದು ವರದಿಯಾಗಿದೆ.
ಸೌಜನ್ಯ ಪ್ರಕರಣದ ತನಿಖೆ ನಡೆಸಿದ್ದ ಯೋಗೇಶ್ ಅವರು ಈ ವಾರದೊಳಗೆ ಎಸ್ಐಟಿ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಪ್ರಕರಣದ ತನಿಖೆಯ ಆರಂಭಿಕ ಹಂತದಲ್ಲೇ ಸಾಕ್ಷ್ಯ ನಾಶವಾಗಿದೆ ಎಂದು ಸೌಜನ್ಯ ಅವರ ಪೋಷಕರು ಈ ಹಿಂದೆ ಆರೋಪಗಳನ್ನು ಮಾಡಿದ್ದರು. ಅಂದಿನ ತನಿಖಾಧಿಕಾರಿ ಯೋಗೇಶ್ ವಿರುದ್ಧವೂ ಅವರು ಗಂಭೀರ ಆರೋಪಗಳನ್ನು ಹೊರಿಸಿದ್ದರು.
ಇದೀಗ ಪ್ರಕರಣದ ಮರುತನಿಖೆಯ ಭಾಗವಾಗಿ ಅಂದಿನ ತನಿಖಾಧಿಕಾರಿಯನ್ನು ವಿಚಾರಣೆಗೆ ಕರೆಯಲಾಗಿದೆ ಎನ್ನಲಾಗಿದ್ದು, ಈ ಬೆಳವಣಿಗೆ ಪ್ರಕರಣದಲ್ಲಿ ಮತ್ತಷ್ಟು ಕುತೂಹಲ ಮೂಡಿಸಿದೆ.

