Thursday, March 12, 2026
Flats for sale
Homeಜಿಲ್ಲೆಮಂಗಳೂರು ; ಪರಂಗಿಪೇಟೆ ನಿವಾಸಿ ದಿಗಂತ್ ನಾಪತ್ತೆ ಪ್ರಕರಣ,ಕೊನೆಗೂ 10 ದಿನಗಳ ಬಳಿಕ ಉಡುಪಿಯಲ್ಲಿ ಜೀವಂತವಾಗಿ...

ಮಂಗಳೂರು ; ಪರಂಗಿಪೇಟೆ ನಿವಾಸಿ ದಿಗಂತ್ ನಾಪತ್ತೆ ಪ್ರಕರಣ,ಕೊನೆಗೂ 10 ದಿನಗಳ ಬಳಿಕ ಉಡುಪಿಯಲ್ಲಿ ಜೀವಂತವಾಗಿ ಪತ್ತೆ..!

ಮಂಗಳೂರು ; ಫರಂಗಿಪೇಟೆಯ ಅಮೆಮಾರ್ ನಿವಾಸಿ ಯುವಕ 19 ವರ್ಷ ಪ್ರಾಯದ ದಿಗಂತ್ ಫೆಬ್ರವರಿ 25 ರಿಂದ ನಾಪತ್ತೆಯಾಗಿದ್ದನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ನಾಯಕರು ದಿಗಂತ್ ಮನೆಗೆ ಭೇಟಿ ನೀಡಿ ಮನೆಯವರಿಗೆ ಸಾಂತ್ವಾನ ಹೇಳಿದ್ದು ಹಲವು ಕಡೆ ಪ್ರತಿಭಟನೆ ನಡೆಸಿದ್ದರು.

ಇದೀಗವನಿಗೂಢ ರೀತಿಯಲ್ಲಿ ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಸುಮಾರು 10 ದಿನದ ಬಳಿಕ ಮಾ.8ರ ಶನಿವಾರ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಮಾಹಿತಿ ದೊರೆತಿದೆ. ಪೊಲಿಸರು ಆತನನ್ನು ಕರೆತರುತ್ತಿದ್ದಾರೆ ಎನ್ನಲಾಗಿದೆ.

ರಾಜ್ಯ ಸರ್ಕಾರ ಹಾಗೂ ಪೊಲೀಸ್‌ ಇಲಾಖೆ ಗಂಭೀರವಾಗಿ ಪರಿಗಣಿಸಿ, 40ಕ್ಕೂ ಅಧಿಕ ಪೋಲೀಸರ ತಂಡ ಹುಡುಕಾಟ ನಡೆಸಿದ್ದರು. ಡಿ‌ಎಆರ್ ತಂಡದ 30 ಪೋಲೀಸರು, ರೈಲ್ವೆ ಪೋಲೀಸ್, ಅಗ್ನಿಶಾಮಕ ದಳ, ಎಫ್.ಎಸ್.ಎಲ್, ಡಾಗ್ ಸ್ಕ್ವಾಡ್, ಡ್ರೋನ್ ಕ್ಯಾಮೆರಾಗಳನ್ನು ಬಳಿಸಿ ಹುಡುಕಾಟ ನಡೆಸಿದ್ದರು ಇಂದು ಕೂಡ ಅನೇಕ ಕಡೆಗಳಲ್ಲಿ ಕ್ಯೂಬಿಂಗ್ ಕಾರ್ಯಚರಣೆ ಕೂಡ ನಡೆಸಿತ್ತು ಒಟ್ಟಿನಲ್ಲಿ ನಾಪತ್ತೆಯಾದ ಯುವಕ ಸಿಕ್ಕಿರುವವುದು ಪೋಲಿಸ್ ಇಲಾಖೆ ನಿಟ್ಟುಸಿರು ಬಿಟ್ಟಂತಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular