Thursday, March 12, 2026
Flats for sale
Homeಕ್ರೈಂಮಂಗಳೂರು : ಪೊಲೀಸರ ಭರ್ಜರಿ ಬೇಟೆ, ಅಮೆಜಾನ್​ಗೆ 20 ಕೋಟಿಗೂ ಅಧಿಕ ಪಂಗನಾಮ ಮಾಡಿದ ಖತರ್ನಾಕ್​...

ಮಂಗಳೂರು : ಪೊಲೀಸರ ಭರ್ಜರಿ ಬೇಟೆ, ಅಮೆಜಾನ್​ಗೆ 20 ಕೋಟಿಗೂ ಅಧಿಕ ಪಂಗನಾಮ ಮಾಡಿದ ಖತರ್ನಾಕ್​ ಖದೀಮರ ಬಂಧನ..!

ಮಂಗಳೂರು : ತಮಿಳುನಾಡು, ಕೇರಳ, ಅಸ್ಸಾಂ, ಕರ್ನಾಟಕ, ದೆಹಲಿ, ಉತ್ತರ ಪ್ರದೇಶ, ಬಿಹಾರ ಸೇರಿದಂತೆ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಅಮೆಜಾನ್ ಕಂಪನಿಯ ಆನ್​ಲೈನ್ ಮೂಲಕ ವಿವಿಧ ರೀತಿಯ ಬೆಲೆಬಾಳುವ ಸಾಮಾಗ್ರಿಗಳನ್ನು ಖರೀದಿಸಿ ವಂಚನೆ ಮಾಡುತಿದ್ದ ಖತರ್ನಾಕ್​ ಖದೀಮರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಬಂಧಿತರನ್ನು ರಾಜಸ್ಥಾನದ ಧೋಪುರ್ ಜಿಲ್ಲೆಯ ನಿವಾಸಿ ರಾಜ್ ಕುಮಾರ್ ಮೀನಾ (23), ಕರೌಲಿ ಜಿಲ್ಲೆಯ ಸುಭಾಸ್ ಗುರ್ಜರ್ (27) ಎಂದು ಗುರುತಿಸಲಾಗಿದೆ.

ಆರೋಪಿಗಳು ಅಮೆಜಾನ್​ನಲ್ಲಿ ವಿವಿಧ ರೀತಿಯ ಬೆಲೆಬಾಳುವ ಸಾಮಗ್ರಿಗಳನ್ನು ಆರ್ಡರ್​​ ಮಾಡುತ್ತಿದ್ದರು. ವಸ್ತುಗಳ ಡಿಲೇವರಿ ಪಡೆಯಲು ಟೈಯರ್ ಟು ಸಿಟಿ ಲೋಕೆಷನ್ ಆಯ್ಕೆ ಮಾಡುತ್ತಿದ್ದರು. ಬುಕ್ ಮಾಡಿದ ವಸ್ತುಗಳನ್ನು ಡೆಲಿವರಿ ಪಡೆಯಲು ಆರೋಪಿಗಳು ವಿಮಾನದಲ್ಲಿ ಹೋಗುತ್ತಿದ್ದರು. ವಸ್ತುವಿನ ಬಾಕ್ಸ್​ ಮೇಲಿನ ಟ್ರ್ಯಾಕಿಂಗ್ ಐಡಿಯನ್ನು ಅದಲು ಬದಲು ಮಾಡಿ ಅಮೆಜಾನ್ ಸಂಸ್ಥೆಗೆ ವಂಚಿಸುತಿದ್ದರು.ವಸ್ತುಗಳು ಡೆಲವರಿಯಾದ ಬಳಿಕ, ಅದರ ಮೇಲಿನ ಟ್ರ್ಯಾಕಿಂಗ್ ಲೇಬಲ್​ಗಳನ್ನು ಅದೇ ರೀತಿಯ ಕಡಿಮೆ ಬೆಲೆಯ ವಸ್ತುಗಳ ಬಾಕ್ಸ್​​ ಮೇಲೆ ಹಚ್ಚುತ್ತಿದ್ದರು. ನಂತರ, ರಿಟರ್ನ್​​ ಮಾಡುತ್ತಿದ್ದರು. ದುಬಾರಿ ಬೆಲೆಯ ವಸ್ತುಗಳನ್ನು ತಮ್ಮಲ್ಲೇ ಇಟ್ಟುಕೊಂಡು ವಂಚಿಸುತ್ತಿದ್ದರು.ದುಬಾರಿ ಬೆಲೆಯ ವಸ್ತುಗಳನ್ನು ಸೆಕೆಂಡ್ ಹ್ಯಾಂಡ್​ಗೆ ಮಾರಾಟ ಮಾಡುತ್ತಿದ್ದರು. ಐಟಂ ರಿಟರ್ನ್ ಆದ ಬಳಿಕ ಆರ್ಡರ್​ಗೆ ಬಳಸಿದ ಸಿಮ್ ಕಿತ್ತೆಸೆಯುತ್ತಿದ್ದರು. ವಸ್ತು ಅಮೇಜಾನ್ ಗೋಡಾನ್ ತಲುಪಿದ ಬಳಿಕ ವಂಚನೆ ಬೆಳಕಿಗೆ ಬರುತ್ತಿತ್ತು.

ಖತರ್ನಾಕ್​ ಕ್ರಿಮಿನಲ್ಸ್​ ಹಿಡಿಯಲು ಬಲೆ ಬೀಸಿದ ಪೊಲೀಸರು ಕೊನೆ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದು ಮಂಗಳೂರಿನ ಉರ್ವಾ ಠಾಣೆಯಲ್ಲಿ ಸೆ.21ರಂದು ಪ್ರಕರಣ ದಾಖಲಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular