Thursday, July 23, 2026
Homeಜಿಲ್ಲೆಮಂಗಳೂರು : ಕೇರಳದ ಪ್ರಸಿದ್ದ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಮುಖ್ಯ ಅರ್ಚಕರಾಗಿ ಬೆಳ್ತಂಗಡಿ ತಾಲೂಕಿನ...

ಮಂಗಳೂರು : ಕೇರಳದ ಪ್ರಸಿದ್ದ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಮುಖ್ಯ ಅರ್ಚಕರಾಗಿ ಬೆಳ್ತಂಗಡಿ ತಾಲೂಕಿನ ಸತ್ಯನಾರಾಯಣ ತೋಡ್ತಿಲ್ಲಾಯ ನೇಮಕ.

ಮಂಗಳೂರು : ಬಂಗಾರದ ಒಡೆಯ ದೇಶದ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಕೇರಳದ ತಿರುವನಂತಪುರದ ಪ್ರಸಿದ್ದ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಮುಖ್ಯ ಅರ್ಚಕರಾಗಿ ದಕ್ಷಿಣ ಕನ್ನಡಜಿಲ್ಲೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸತ್ಯನಾರಾಯಣ (ನಾಗೇಶ) ತೋಡ್ತಿಲ್ಲಾಯ ಜೂ.16ರಂದು ನೇಮಕಗೊಂಡಿದ್ದಾರೆ.

ದಿ. ಸುಬ್ರಾಯ ತೋಡ್ತಿಲ್ಲಾಯ ಮತ್ತು ದಿ.ಯಶೋಧ ದಂಪತಿಗಳ ಪುತ್ರರಾದ ಸತ್ಯನಾರಾಯಣ (ನಾಗೇಶ) ತೋಡ್ತಿಲ್ಲಾಯ ಮೂಲತಃ ಕೊಕ್ಕಡ ಗ್ರಾಮದ ಬಡೆಕ್ಕರ ನಿವಾಸಿ.ಈ ಹಿಂದೆ ದಿವಂಗತ ಸುಬ್ರಾಯ ತೋಡ್ತಿಲ್ಲಾಯರು ಕೂಡ ಇದೇ ದೇವಸ್ಥಾನದಲ್ಲಿ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.ಪಾಲಾಲೆ ದಿ. ಸತೀಶ ಯಡಪಡಿತ್ತಾಯರಲ್ಲಿ ವೇದ ಅಭ್ಯಾಸವನ್ನು ಮಾಡಿದ್ದ ಸತ್ಯನಾರಾಯಣ ತೋಡ್ತಿಲ್ಲಾಯರು ಕಳೆದ 20 ವರ್ಷಗಳಿಂದ ಪತ್ನಿ ಸ್ನೇಹ ಹಾಗೂ ಪುತ್ರ ಸೌರಭ್ ಜೊತೆಬ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

ಸತ್ಯನಾರಾಯಣ ತೋಡ್ತಿಲ್ಲಾಯ ಅವರ ಅಜ್ಜ ದಿ.ನಾರಾಯಣ ತೋಡ್ತಿಲ್ಲಾಯರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹಲವು ವರ್ಷಗಳ ಕಾಲ ಪೂಜಾ ಸೇವೆಯನ್ನು ಸಲ್ಲಿಸಿದ್ದರು.ಎಡಪಡಿತ್ತಾಯ, ಬಾಳ್ತಿಲ್ಲಾಯ, ಶಬರಾಯ, ಉಪ್ಪಾರ್ಣ, ತೋಡ್ತಿಲ್ಲಾಯ ಕುಲದ ಸದಸ್ಯರಿಗೆ ಹಿಂದಿನಿಂದಲೂ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸುವ ಹಕ್ಕು ಇದ್ದು ಅಕ್ಕರ ದೇಸಿ ಸಮುದಾಯ ಸಂಘವು ಸತ್ಯನಾರಾಯಣರವರ ನೇಮಕಕ್ಕೆ ಶಿಫಾರಸು ಮಾಡಿದೆ ಎಂದು ತಿಳಿದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular