Saturday, January 31, 2026
Flats for sale
Homeಜಿಲ್ಲೆಮಂಗಳೂರು : ಬಿಜೈ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಬ್ಯಾಗ್ ಕಳ್ಳತನ ಪ್ರಕರಣ,ಅಂತರ್ ಜಿಲ್ಲೆಯ ಕುಖ್ಯಾತ ಕಳ್ಳನ...

ಮಂಗಳೂರು : ಬಿಜೈ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಬ್ಯಾಗ್ ಕಳ್ಳತನ ಪ್ರಕರಣ,ಅಂತರ್ ಜಿಲ್ಲೆಯ ಕುಖ್ಯಾತ ಕಳ್ಳನ ಬಂಧನ.

ಮಂಗಳೂರು : ಬಿಜೈ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದಲ್ಲಿ ಜ. 23 ರಂದು ಸಂಜೆ ಸಮಯ ಸುಮಾರು 7-00 ಗಂಟೆಗೆ ಪ್ರಾಯಸ್ಥ ಇಬ್ಬರು ಮಹಿಳೆಯರು ಮತ್ತು ಹಿರಿಯ ನಾಗರಿಕರು ಬೆಂಗಳೂರಿಗೆ ಹೋಗುವ ಬಸ್ಸಿನಲ್ಲಿ ಸುಮಾರು 45 ಗ್ರಾಂ ಚಿನ್ನಾಭರಣ ಹಾಗೂ ರೂ.20,000/- ನಗದು ಹಣ ಇರುವ ಟ್ರಾಯಲಿ ಬ್ಯಾಗ್ ನ್ನು ಇಟ್ಟು ಕುಳಿತುಕೊಂಡಿದ್ದ ಸಂದರ್ಭದಲ್ಲಿ ಯಾರೋ ಕಳ್ಳರು ಚಿನ್ನಾಭರಣಗಳಿರುವ ಬ್ಯಾಗ್ ನ್ನು ಕಳವು ಮಾಡಿಕೊಂಡ ಹೋದ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು ಈ ಬಗ್ಗೆ ಮೊ.ನಂ:10/2026 ಕಲಂ: 303(2), BNS-2023 ರಂತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು.

ಪ್ರಕರಣದ ಪತ್ತೆಯ ಕುರಿತು ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದು, ಕಳವು ಪ್ರಕರಣಗಳಲ್ಲಿ ಭಾಗಿಯಾದ ಅಂತರ್ ಜಿಲ್ಲೆ ಕಳ್ಳನಾದ ಮಡಿಕೇರಿಯ ಮಹಮ್ಮದ್ ಇಮ್ರಾನ್ ಎನ್.ಎಮ್ ಬಂಧಿಸಿದ್ದಾರೆ.ಮಂಗಳೂರು ಸೆಂಟ್ರಲ್ ರೈಲ್ವೇ ಸ್ಟೇಷನ್ ನ ಬಳಿ ಆರೋಪಿಯನ್ನು ಬಂಧಿಸಿದ್ದು ಆರೋಪಿಯಿಂದ ಒಟ್ಟು ರೂ 6,47,920/- ಬೆಲೆಬಾಳುವ 46.28 ಗ್ರಾಂ ತೂಕದ ಚಿನ್ನದ ಒಡವೆ ರೂ.5000/- ನಗದು ಹಣವನ್ನು ಸ್ವಾಧೀನಪಡಿಸಲಾಗಿದೆ.

ಈತನ ಮೇಲೆ ಒಟ್ಟು 11 ಪ್ರಕರಣಗಳು ದಾಖಲಾಗಿದ್ದು. ದುದ್ದ ಪೊಲೀಸ್ ಠಾಣೆಯಲ್ಲಿ-1, ಕೊಮನೂರು ಪೊಲೀಸ್ ಠಾಣೆಯಲ್ಲಿ-1, ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ-1, ಹಾಸನ ನಗರ ಪೊಲೀಸ್ ಠಾಣೆಯಲ್ಲಿ-1, ಚೆನ್ನರಾಯಪಟ್ಟಣ ನಗರ ಠಾಣೆಯಲ್ಲಿ-1, ಮೈಸೂರು ದೇವರಾಜ ನಗರ ಪೊಲೀಸ್ ಠಾಣೆಯಲ್ಲಿ-1 ಬ್ಯಾಗ್ ಕಳ್ಳತನ ಪ್ರಕರಣಗಳು ದಾಖಲಗಿದ್ದು, ಹಾಸನ ಜಿಲ್ಲೆ ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ-1, ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ -2, ಹಾಸನ ಜಿಲ್ಲೆ ದುದ್ದ ಪೊಲೀಸ್ ಠಾಣೆಯಲ್ಲಿ-1 ಮನೆ ಕಳ್ಳತನ ಪ್ರಕರಣ ದಾಖಲಾಗಿರುತ್ತದೆ.ಈತನನ್ನು ಜ ೨೯ ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular