ಮಂಗಳೂರು: ಮಂಗಳೂರು, ಡಿ.9: ಬುರ್ಖಾ ಧರಿಸಿ ಐಟಂ ಸಾಂಗ್‌ಗೆ ಡ್ಯಾನ್ಸ್ ಮಾಡಿದ ಆರೋಪದ ಮೇಲೆ ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾದ ನಾಲ್ವರು ಬಾಲಕರನ್ನು ಶುಕ್ರವಾರ ಅಮಾನತುಗೊಳಿಸಲಾಗಿದೆ.
ಬುಧವಾರ ಸಂಜೆ ಕಾಲೇಜಿನಲ್ಲಿ ಕಾರ್ಯಕ್ರಮ ನಡೆದಿತ್ತು. ಕಾರ್ಯಕ್ರಮ ಮುಗಿದ ನಂತರ ಕಾಲೇಜಿನ ವಿದ್ಯಾರ್ಥಿಗಳು ಬುರ್ಖಾ ಧರಿಸಿ ವೇದಿಕೆಗೆ ಏರಿ ನೃತ್ಯ ಮಾಡಿದರು.
ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರ ನಡುವೆ ಬಿಸಿ ಬಿಸಿ ಚರ್ಚೆ ನಡೆಯುತಿತ್ತು.
ಇದನ್ನು ಗಂಭೀರವಾಗಿ ಪರಿಗಣಿಸಿದ ಕಾಲೇಜು ಆಡಳಿತ ಮಂಡಳಿ ಆಂತರಿಕ ವಿಚಾರಣೆ ನಡೆಸಿ ನಾಲ್ವರು ಬಾಲಕರನ್ನು ಅಮಾನತುಗೊಳಿಸಿದೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಕಾಲೇಜಿನ ಹಂಗಾಮಿ ಪ್ರಾಂಶುಪಾಲರು, ಅಧಿಕೃತ ಕಾರ್ಯಕ್ರಮ ಮುಗಿದ ಬಳಿಕ ವಿಡಿಯೋದಲ್ಲಿ ನೃತ್ಯ ನಡೆದಿದೆ. ವಿವಿಧ ಸಮುದಾಯಗಳ ನಡುವಿನ ಸೌಹಾರ್ದತೆಗೆ ಧಕ್ಕೆ ತರುವ ಯಾವುದೇ ಕೃತ್ಯವನ್ನು ಕಾಲೇಜು ಕ್ಯಾಂಪಸ್‌ನಲ್ಲಿ ಬೆಂಬಲಿಸುವುದಿಲ್ಲ.