ಮಂಗಳೂರು : ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ಸೀಫುಡ್ ಫ್ಯಾಕ್ಟರಿಯಲ್ಲಿ ಗುರುವಾರ ಮಾ.28ರಂದು ಭೀಕರ ಅಗ್ನಿ ಅವಘಡ ಸಂಭವಿಸಿದ್ದು ಕೋಟ್ಯಂತರ ರೂಪಾಯಿಯಾ ವಸ್ತುಗಳು ಬೆಂಕಿಗೆಆಹುತಿಯಾದ ಘಟನೆ ವರದಿಯಾಗಿದೆ .
ಬೆಳಗಿನ ಜಾವ 4.45ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಇಡೀ ಕಾರ್ಖಾನೆಗೆ ಬೆಂಕಿ ಆವರಿಸಿದೆ. ಎಂಆರ್ಪಿಎಲ್ ಮತ್ತು ಎನ್ಎಂಪಿಟಿಯ ಎಂಟು ಅಗ್ನಿಶಾಮಕ ಟೆಂಡರ್ ವಾಹನಗಳು ಸುಮಾರು ಮೂರೂವರೆ ಗಂಟೆಗಳ ಕಾರ್ಯಾಚರಣೆಯ ನಂತರ ಬೆಂಕಿಯನ್ನು ನಂದಿಸಲು ಹರಸಾಹಸಪಟ್ಟಿವೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣ ಎನ್ನಲಾಗಿದೆ. 3 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.ಬೆಂಕಿಗೆ ಕಾರಣ ಮತ್ತು ಹಾನಿಯ ಪ್ರಮಾಣವನ್ನು ಪ್ರಸ್ತುತ ಸ್ಥಳೀಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.


