ಮಂಗಳೂರು : ರಾಷ್ಟ್ರೀಯ ಹೆದ್ದಾರಿ 169 ರ ಗಂಜಿಮಠದ ಮುಚ್ಚೂರು ಕ್ರಾಸ್ ಬಳಿ ಶುಕ್ರವಾರ ಸಂಜೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟಿದ್ದಾನೆ.
ಗುರುಪುರ ಹೊಸಮನೆ ನಿವಾಸಿ ಸಚಿನ್ ಕುಮಾರ್ ಆಚಾರ್ಯ (33) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಚಿನ್ ಎಚ್ಡಿಎಫ್ಸಿ ಬ್ಯಾಂಕ್ನಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಇವರ ಮೋಟಾರ್ ಸೈಕಲ್ ಅನ್ನು ಹಿಂದಿಕ್ಕಲು ಯತ್ನಿಸಿದ ಟಿಪ್ಪರ್ ಡಿಕ್ಕಿ ಹೊಡೆದಿದೆ.
ಸಚಿನ್ ಅವರ ಪೋಷಕರು, ಒಬ್ಬ ಸಹೋದರ ಮತ್ತು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಘಟನೆ ಸಂಬಂಧ ಬಜ್ಪೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.


